Header Ads
Header Ads
Breaking News

ಜಿಲ್ಲೆಯ 5 ಮಂದಿ ಬಿಜೆಪಿ ಅಭ್ಯರ್ಥಿಗಳು ಕಳಂಕಿತರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿಕೆ

ಮೂಡುಬಿದಿರೆ: ದ.ಕ ಜಿಲ್ಲೆಯ ಮತದಾರರ ಒಲವು ಕಾಂಗ್ರೆಸ್ ಕಡೆಗಿದೆ. ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ನಿಂತಿರುವ ಐದು ಮಂದಿ ಅಭ್ಯರ್ಥಿಗಳು ಕಳಂಕಿತರಾಗಿದ್ದು, ಇದನ್ನು ಬಿಜೆಪಿಯವರೇ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.ಅವರು, ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೂಡುಬಿದಿರೆ ಕ್ಷೇತ್ರದ ಅಭ್ಯರ್ಥಿ ಅಭಯಚಂದ್ರ ಜೈನ್ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಜನರ ಮೇಲೆ ಅವರಿಗೆ, ಅವರ ಮೇಲೆ ಜನರಿಗೆ ವಿಶ್ವಾಸವಿದೆ. ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತ ಮಾತ್ರವಲ್ಲ ಮೂಡುಬಿದಿರೆ ಅಭಿವೃದ್ಧಿಯ ಹರಿಕಾರ. ಅವರು ಕಳೆದ ಬಾರಿಯ ವಿಧಾನಸಭಾ ಚುನಾವಣೆಗಿಂತ ಅವರು ಹೆಚ್ಚಿನ ಅಂತರದಲ್ಲಿ ಜಯಗಳಿಸಲಿದ್ದಾರೆ. ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಕೆ.ಅಭಯಚಂದ್ರ ಜೈನ್, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು, ಮೂಡುಬಿದಿರೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಶೆಟ್ಟಿ, ಪುರಸಭಾ ಸದಸ್ಯ ಸುರೇಶ್ ಕೋಟ್ಯಾನ್ ಸುದ್ದಿಗೋಷ್ಠಿಯಲ್ಲಿದ್ದರು.

ವರದಿ: ಪ್ರೇಮಶ್ರೀ ಮೂಡಬಿದರೆ

Related posts

Leave a Reply