Header Ads
Header Ads
Header Ads
Header Ads
Header Ads
Header Ads
Breaking News

ಜೀವನಶಿಕ್ಷಣ ನೀಡುವಲ್ಲಿ ಎನ್‍ಎಸ್‍ಎಸ್ ಶಿಬಿರಗಳ ಪಾತ್ರ ಮಹತ್ತರವಾದುದು: ಕೊರಗಪ್ಪ ನಾಯ್ಕ

ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ನೇತೃತ್ವದಲ್ಲಿ ಪ್ರತಿವರ್ಷ ನಡೆಯುವ ವಾರ್ಷಿಕ ವಿಶೇಷ ಶಿಬಿರಗಳು ವಿದ್ಯಾರ್ಥಿಗಳಿಗೆ ಜೀವನಶಿಕ್ಷಣ ನೀಡುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತವೆ ಎಂದು ಧರ್ಮಸ್ಥಳ ಕ್ಷೇತ್ರದ ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ ಅಭಿಪ್ರಾಯಪಟ್ಟರು.
ಅವರು ಇತ್ತೀಚೆಗೆ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಬೆಳಾಲಿನ ಶ್ರೀ. ಧ.ಮಂ. ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಮನುಷ್ಯ ಜೀವನದಲ್ಲಿ ಸಮಸ್ಯೆಗಳು ಬರುವುದು ಸರ್ವೇಸಾಮಾನ್ಯ ಪ್ರಕ್ರಿಯೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ದಾರಿಯನ್ನು ನಾವು ಕಂಡುಕೊಳ್ಳಬೇಕಾಗಿದೆ. ಉಜಿರೆ ಎಸ್.ಡಿ.ಎಮ್ ಕಾಲೇಜು ಸುಮಾರು ಐದು ದಶಕಗಳಿಂದ ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ವಿಷಯಗಳನ್ನು ಮಾತ್ರ ಬೋಧಿಸದೆ ಅದರ ಜೊತೆ ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ, ಸಾಂಸ್ಕøತಿಕ, ಮತ್ತು ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗುವ ಹಲವು ಮೌಲ್ಯಗಳನ್ನು ಬೋಧಿಸಿಕೊಂಡು ಬರುವ ಮೂಲಕ ಅವರ ಉನ್ನತಿಯಲ್ಲಿ ಮಹತ್ತರವಾದ ಪಾತ್ರವನ್ನು ನಿರ್ವಹಿಸಿಕೊಂಡು ಬಂದಿದೆ ಎಂದು ಶ್ಲಾಘಿಸಿದರು.

ಕಾಲೇಜಿನ ಎನ್‍ಎಸ್‍ಎಸ್ ಘಟಕವು ಸ್ವಚ್ಛತೆ ಮತ್ತು ಜಲಜಾಗೃತಿ ಅಭಿಯಾನದ ಕುರಿತು ಹೊರತಂದ ಮಾಹಿತಿ ಕರಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದ ಬೆಳಾಲಿನ ಸರಸ್ವತಿ ಹಿ.ಪ್ರಾ. ಶಾಲಾ ಸಂಚಾಲಕ ರಾಜಾರಾಮ್ ಶರ್ಮ ಎನ್.ಎಸ್.ಎಸ್ ಶಿಬಿರಗಳು ವಿದ್ಯಾರ್ಥಿ ಜೀವನದಲ್ಲಿ ಬದಲಾವಣೆಯನ್ನು ತರುವುದರ ಜೊತೆಯಲ್ಲಿಯೇ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳ ನಡುವೆ ಉತ್ತಮ ಬಾಂಧವ್ಯವನ್ನು ವೃದ್ಧಿಗೊಳಿಸುತ್ತದೆ ಎಂದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬೆಳಾಲು ಗ್ರಾ. ಪಂ. ಅಧ್ಯಕ್ಷ ದಿನೇಶ್ ಕೋಟ್ಯಾನ್, ಗ್ರಾ. ಪಂ. ಸದಸ್ಯರಾದ ವಿಮಲಾ, ಕುಸುಮಾವತಿ, ಶಾಲಾ ಪೋಷಕರ ಸಂಘದ ಅಧ್ಯಕ್ಷ ರತ್ನಾಕರ ಆಚಾರ್ಯ, ಶಾಲಾ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಸಿ ಮಾತನಾಡಿ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಎನ್. ದಿನೇಶ್ ಚೌಟ ಮಾತನಾಡಿ ಮಹಾತ್ಮಾ ಗಾಂಧೀಜಿಯವರ ಜನ್ಮಶತಮಾನೋತ್ಸವದ ಸವಿನೆನಪಿಗಾಗಿ ಪ್ರಾರಂಭಗೊಂಡ ಎನ್.ಎಸ್‍ಎಸ್. ಇದೀಗ ಐವತ್ತರ ಸಂಭ್ರಮದಲ್ಲಿದೆ. ಸಮಾಜದಲ್ಲಿ ವಿಭಜಿತ ಕುಟುಂಬಗಳೇ ಹೆಚ್ಚುತ್ತಿರುವ ಇತ್ತೀಚಿನ ದಿನಗಳಲ್ಲಿ ಎನ್‍ಎಸ್‍ಎಸ್ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತುವ ಮೂಲಕ ಅವರನ್ನು ಪ್ರಜ್ಞಾವಂತ ಪ್ರಜೆಗಳನ್ನಾಗಿ ರೂಪಿಸುತ್ತಿದೆ. ಎನ್‍ಎಸ್‍ಎಸ್‍ನ ವಾರ್ಷಿಕ ವಿಶೇಷ ಶಿಬಿರಗಳು ಈ ನೆಲೆಯಲ್ಲಿ ಮಹತ್ರವಾದ ಪಾತ್ರವನ್ನು ವಹಿಸುತ್ತವೆ ಎಂದರು.

ಶಿಬಿರಾಧಿಕಾರಿಗಳಾದ ನಿಹಾರಿಕಾ ಜಿ.ಎನ್., ರಾಜು ಎ.ಎ ಉಪಸ್ಥಿತರಿದ್ದರು. ಸ್ವಯಂಸೇವಕರಾದ ಮಹಿಮಾ ಸ್ವಾಗತಿಸಿ, ಅಂಕಿತಾ ವಂದಿಸಿದ ಕಾರ್ಯಕ್ರಮವನ್ನು ಅರ್ಪಿತಾ ನಿರೂಪಿಸಿದರು.
-ದಶಮಿ ಕೊಕ್ಕಡ

Related posts

Leave a Reply

Your email address will not be published. Required fields are marked *