Header Ads
Header Ads
Breaking News

ಜುಲೈ 16ರಿಂದ ಶುಲ್ಕ ಸಂಗ್ರಹಿಸಲು ನಿರ್ಧರಿಸಿದ ಹೆದ್ದಾರಿ ಪ್ರಾಧಿಕಾರ : ಹೋರಾಟ ಸಮಿತಿಯಿಂದ ತೀವ್ರ ವಿರೋಧ

ಸುರತ್ಕಲ್ ಟೋಲ್‌ಗೇಟ್‌ನಲ್ಲಿ ಸ್ಥಳೀಯ ಖಾಸಗಿ ವಾಹನಗಳ ಸುಂಕ ವಿನಾಯಿತಿಯನ್ನು ರದ್ದುಗೊಳಿಸಿ ಜು.16ರಿಂದ ಕಡ್ಡಾಯ ಶುಲ್ಕ ಸಂಗ್ರಹಿಸಲು ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಜಿಲ್ಲಾಡಳಿತ ಶುಲ್ಕ ಸಂಗ್ರಹಕ್ಕೆ ಪೊಲೀಸ್ ರಕ್ಷಣೆ ಒದಗಿಸಲು ನಿರ್ಧರಿಸಿರುವು ದನ್ನು ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯು ತೀವ್ರವಾಗಿ ಖಂಡಿಸಿದೆ.

ನಿಯಮದ ಪ್ರಕಾರ ಸುಂಕ ವಸೂಲಿಯೇ ಅಕ್ರಮವಾಗಿದೆ. ಸ್ವತಃ ಹೆದ್ದಾರಿ ಪ್ರಾಧಿಕಾರವೇ ಮುಚ್ಚಲು ತೀರ್ಮಾನ ಕೈಗೊಂಡಿರುವ ಟೋಲ್ ಗೇಟ್‌ನಲ್ಲಿ ಯಾವುದೇ ಕಾರಣಕ್ಕೂ ಸ್ಥಳೀಯ ವಾಹನಗಳಿಂದ ಟೋಲ್ ಸಂಗ್ರಹಿಸಲು ಹೋರಾಟ ಸಮಿತಿ ಅವಕಾಶ ನೀಡುವುದಿಲ್ಲ. ಅಕ್ರಮ ವಸೂಲಿಗೆ ಪೊಲೀಸ್ ರಕ್ಷಣೆ ಒದಗಿಸುವ ಬದಲಿಗೆ ಜಿಲ್ಲಾಡಳಿತ ಟೋಲ್‌ಗೇಟ್ ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಮೂರು ತಿಂಗಳ ತಾತ್ಕಾಲಿಕ ಅವಧಿಗೆ ಆರಂಭಗೊಂಡ ಸುರತ್ಕಲ್ ಟೋಲ್‌ಗೇಟ್ ಒಂಬತ್ತು ಕಿ.ಮೀ. ದೂರದ ಹೆಜಮಾಡಿ ಟೋಲ್‌ಗೇಟ್ ಕಾರ್ಯಾಚರಣೆ ಆರಂಭಿಸಿದ ನಂತರವೂ ಮುಂದುವರಿಯುತ್ತಿರುವುದು ಅಕ್ರಮವಾಗಿದೆ ಎಂದು ತಿಳಿಸಿದರು.

ಈಗಿರುವ ಟೋಲ್ ಸಂಗ್ರಹದ ಗುತ್ತಿಗೆ ಇದೇ ಅಕ್ಟೋಬರ್‌ಗೆ ಕೊನೆಯಾಗುತ್ತದೆ. ಆ ನಂತರ ಯಾವ ಸಬೂಬು ನೀಡದೆ ನಿಯಮ ಪ್ರಕಾರ ಟೋಲ್ ಕೇಂದ್ರವನ್ನು ಮುಚ್ಚಬೇಕು. ಅಲ್ಲಿಯವರಗೆ ಯಾವುದೆ ಕಾರಣಕ್ಕೂ ಸ್ಥಳೀಯ ಖಾಸಗಿ ವಾಹನಗಳಿಗೆ ಶುಲ್ಕ ವಿಧಿಸದೆ ಯಥಾಸ್ಥಿತಿ ಕಾಪಾಡಬೇಕು ಎಂದು ಅವರು ಆಗ್ರಹಿಸಿದರು.

ಪೊಲೀಸ್ ಬಲದೊಂದಿಗೆ ಟೋಲ್ ಸಂಗ್ರಹಕ್ಕೆ ಮುಂದಾದರೆ ಸ್ಥಳೀಯ ಜನಪರ ಸಂಘಟನೆಗಳ ಜೊತೆ ತೀವ್ರ ಪ್ರತಿಭಟನೆಯನ್ನು ನಡೆಸಲಾಗುವುದು. ಅಲ್ಲದೆ, ಟೋಲ್ ಸಂಗ್ರವನ್ನು ತಡೆಯಲಾಗುವುದು ಹೋರಾಟ ಸಮಿತಿಯವರು ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *