Header Ads
Header Ads
Breaking News

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ ಜುಲೈ 18 ರಂದು ಮಂಗಳೂರಿನ ಸ್ವಾಸ್ಥ್ಯ ಸಂಕಲ್ಪ ಉದ್ಘಾಟನೆ

ಮಂಗಳೂರಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ ಜುಲೈ 18ರಂದು ಮಂಗಳೂರಿನ ಸ್ವಾಸ್ಥ್ಯ ಸಂಕಲ್ಪ ಉದ್ಘಾಟನೆ ಮತ್ತು ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಹಾಗೂ ಜ್ಯೋತಿ ಸರ್ಕಲ್‌ನಿಂದ ಪುರಭವನದವರೆಗೆ ಬೃಹತ್ ಜನಜಾಗೃತಿ ಜಾಥಾ ನಡೆಯಲಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹಾಬಲ ಚೌಟ ತಿಳಿಸಿದ್ರು.
ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ರು. ಇನ್ನು ಅಕ್ಟೋಬರ್ ೬ರಂದು ಮಹಾತ್ಮಾ ಗಾಂಧಿ ಜಯಂತಿ ಪ್ರಯುಕ್ತ ಮಂಗಳೂರಿನ ಪುರಭವನದಲ್ಲುಇ ಪಾನಮುಕ್ತರ ಸಮಾವೇಶ, ಅಭಿನಂದನೆ ಮತ್ತು ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರೊಂದಿಗೆ ಮಂಗಳೂರಿನ ಜ್ಯೋತಿ ವೃತ್ತದಿಂದ ಪುರಭವನದವರೆಗೆ ಬೃಹತ್ ಜಾಥಾ ನಡೆಯಲಿದೆ ಎಂದು ಮಾಹಿತಿ ನೀಡಿದ್ರು.
ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯದರ್ಶಿ ಉಮಾರಬ್ಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಉದಯ್ ಕುಮಾರ್, ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಮಾಜಿ ಅಧ್ಯಕ್ಷ ಸದಾಶಿವ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ರು.

Related posts

Leave a Reply

Your email address will not be published. Required fields are marked *