Header Ads
Header Ads
Breaking News

ಜುಲೈ 20ರಿಂದ 22ರ ವರೆಗೆ ಬಿರುಸಿನ ಮಳೆ ಸಾಧ್ಯತೆ : ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರ್ನಾಟಕ ಕರಾವಳಿ ಭಾಗದಲ್ಲಿ ಜು.20ರಿಂದ 22ರ ವರೆಗೆ ನಿತ್ಯ 20 ಸೆಂ.ಮೀ.ಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಳೆಯ ಜತೆ ಸುಮಾರು 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಲಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತ ಕ್ರಮ ಕೈಗೊಂಡಿದೆ ಎಂದರು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಎಚ್ಚರಿಕೆ ವಹಿಸಬೇಕು. ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಸಮಸ್ಯೆಗಳಿಗೆ 1077 ಉಚಿತ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡುವಂತೆ ಸೂಚಿಸಿದ್ದಾರೆ. ವಾಟ್ಸಾಪ್ ಸಂಖ್ಯೆ 9483908000 ನಂಬರಿಗೂ ಮಳೆ ಸಂಬಂಧಿತ ಸಮಸ್ಯೆಗಳಿದ್ದರೆ ತಿಳಿಸಬಹುದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಕರಾವಳಿಯಲ್ಲಿ ಜು. 20ರಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಸೂಚಿಸಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕುಂದಾಪುರ ತಾಲೂಕಿನ ವಿವಿಧೆಡೆ ಮಧ್ಯಾಹ್ನದ ವರೆಗೂ ಉತ್ತಮ ಮಳೆಯಾಗಿದೆ.

Related posts

Leave a Reply

Your email address will not be published. Required fields are marked *