Header Ads
Header Ads
Breaking News

ಜುಲೈ 25ರಿಂದ ಆಗಸ್ಟ್ 15ರ ವರೆಗೆ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ವತಿಯಿಂದ 23ನೇ ವರ್ಷದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾಟವು ಜುಲೈ 25ರಿಂದ ಆಗಸ್ಟ್ 15ರ ವರೆಗೆ ಮಂಗಳೂರಿನ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದ.ಕ. ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷರಾದ ಡಿ.ಎಂ. ಅಸ್ಲಂ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಜುಲೈ 25ರಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಪಂದ್ಯಾಟವನ್ನು ಉದ್ಘಾಟಿಸಲಿರುವರು. ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್, ಮಂಗಳೂರು ಪಾಲಿಕೆಯ ಆಯುಕ್ತರಾದ ಮೊಹಮ್ಮದ್ ನಜೀರ್, ಮೊದಲಾದವರು ಭಾಗವಹಿಸಲಿದ್ದಾರೆ. ಒಟ್ಟು 7 ವಿಭಾಗದಲ್ಲಿ ಪಂದ್ಯಾಟ ನಡೆಯಲಿದ್ದು, ಕಾಲೇಜು ಮತ್ತು ವೃತ್ತಿಪರ ಕಾಲೇಜಿನವರಿಗೂ ಭಾಗವಹಿಸಿಸುವ ಅವಕಾಶವಿದೆ ಎಂದು ಹೇಳಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಅನಿಲ್ ಪಿ.ವಿ, ವಿಜಯ ಸುವರ್ಣ, ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *