Header Ads
Breaking News

ಜೂನ್ 14ರಂದು ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವು ಜೂನ್ 14ರಂದು ಮಂಗಳೂರಿನ ಟೌನ್ ಹಾಲ್‍ನಲ್ಲಿ ನಡೆಯಲಿದೆ ಎಂದು ಭಾರತೀಯ ರೆಡ್‍ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಎಸ್.ಎ ಪ್ರಭಾಕರ್ ಶರ್ಮ ತಿಳಿಸಿದರು.ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಆನಂತರ ದಕ್ಷಿಣ ಕನ್ನಡ ಜಿಲ್ಲಾ ರೆಡ್‍ಕ್ರಾಸ್ ಸೊಸೈಟಿಯ ಚೇರ್‍ಮೆನ್ ರೋಟರಿಯನ್ ಸಿಎ ಶಾಂತರಾಮ ಶೆಟ್ಟಿ ಅವರು ಮಾತನಾಡಿ, ಕಳೆದ ಮೂರು ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲಾ ಬ್ರಾಂಚ್ ವತಿಯಿಂದ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಿಕೊಂಡು ಬರುತ್ತಿದ್ದೇವೆ. ಈ ವರ್ಷ ವಿಭಿನ್ನ ರೀತಿಯಲ್ಲಿ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲು ತಿರ್ಮಾನಿಸಿದ್ದೇವೆ ಎಂದು ಹೇಳಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ರವೀಂದ್ರ ಶೆಟ್ಟಿ, ರವೀಂದ್ರನಾಥ್, ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *