Header Ads
Breaking News

ಜೂನ್ 2ರಂದು ಕಾಟಿಪಳ್ಳ ಗಣೇಶಪುರದ ಶ್ರೀ ಮಹಾಗಣಪತಿ ದೇವಸ್ಥಾನದ ಭಕ್ತರ ಸಭೆ

ಮಂಗಳೂರಿನ ಕಾಟಿಪಳ್ಳ ಗಣೇಶಪುರದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜೂನ್ 2ರಂದು ದೇವಸ್ಥಾನಕ್ಕೆ ಸಂಬಂಧಪಟ್ಟ ಸರ್ವಭಕ್ತರ ವಿಶೇಷ ಸಭೆಯು ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಧರ್ಮೇಂದ್ರ ಗಣೇಶಪುರ ತಿಳಿಸಿದ್ದಾರೆ.
ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶ್ರೀ ಕ್ಷೇತ್ರದಲ್ಲಿ ನಡೆಯುವ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ, ನಾಗಮಂಡಲ ಮುಂತಾದ ಕಾರ್ಯಗಳು ನಿಗದಿತ ಸಮಯದಲ್ಲಿ ನಡೆಯಬೇಕೆಂಬ ಸದುದ್ದೇಶದಿಂದ ಸಭೆಯನ್ನು ಕರೆಯಲಾಗಿದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಭಕ್ತರು ಸಭೆಗೆ ಆಗಮಿಸಬೇಕು.ಇನ್ನು ಶ್ರೀ ಕ್ಷೇತ್ರದಲ್ಲಿ 2003ನೇ ಬ್ರಹ್ಮಕಲಶೋತ್ಸವ ಇಸವಿಯಲ್ಲಿ ನಡೆದಿದೆ. ಇನ್ನು ಬರುವ 2020ನೇ ಇಸವಿಯಲ್ಲಿ ಜೀರ್ಣೋದ್ಧಾರ ಕಾರ್ಯ ಸಾಕಾರಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಭಕ್ತರ ಸಹಕಾರ ಅಗತ್ಯ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *