Header Ads
Breaking News

ಜೂನ್ 20ರಂದು ಪುತ್ತೂರಿನ ಬಂಟರ ಭವನದಲ್ಲಿ ಚಾತುರ್ಪುದ ಮಾನಾದಿಗೆ-2019 ಕಾರ್ಯಕ್ರಮ

ಮಂಗಳೂರಿನ ಅಖಿಲ ಭಾರತ ತುಳು ಒಕ್ಕೂಟ, ಪುತ್ತೂರು ತುಳು ಕೂಟ ಮತ್ತು ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಜಂಟಿಯಾಶ್ರಯದಲ್ಲಿ ಜೂನ್ 22ರಂದು ಪುತ್ತೂರಿನ ಬಂಟರ ಭವನದಲ್ಲಿ ಚಾತುರ್ಪುದ ಮಾನಾದಿಗೆ 2019 ಎನ್ನುವ ಕಾರ್ಯಕ್ರಮ ನಡೆಯಲಿದೆ ಎಂದು ಅಖಿಲ ಭಾರತ ತುಳು ಒಕ್ಕೂಟದ ಪ್ರದಾನ ಕಾರ್ಯದರ್ಶಿ ನಿಟ್ಟೆ ಶಶಿಧರ್ ಶೆಟ್ಟಿ ಬಿಡುಗಡೆಗೊಳಿಸಿದ್ರು.

ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತುಳು ಭಾಟೆಯನ್ನು ಮೂರನೇ ಐಚ್ಛಿಕ ಭಾಷೆಯನ್ನಾಗಿ ತೆಗೆದುಕೊಂಡು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಗೊಂಡು, ತುಳು ಭಾಟೆಯ ಬೆಳವಣಿಗೆಯ ಕೀರ್ತಿ ಪತಾಕೆ ಹಾರಿಸಿದ ವಿದ್ಯಾರ್ಥಿಗಳಿಗೋಸ್ಕರ ಈ ಕಾರ್ಯಕ್ರಮವನ್ನು ಹಮ್ಮಿಕೊಮಡಿದ್ದೇವೆ ಎಂದು ಹೇಳಿದ್ರು.

ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಹರಿಣಿ ವಿಜಯೇಂದ್ರ, ಹರೀಶ್ ನೀರುಮಾರ್ಗ, ಅಖಿಲ ತುಳು ಒಕ್ಕೂಟದ ಗೌರವಾಧ್ಯಕ್ಷರಾದ ಬಿ. ಜಯಶಂಕರ ಶೆಟ್ಟಿ ಇಂದ್ರಾಳಿ, ಕಾರ್ಯಕ್ರಮ ಸಂಯೋಕರಾದ ಕುಂಬ್ರ ದುರ್ಗಾಪ್ರಸಾದ್ ರೈ, ಪುತ್ತೂರು ತುಳು ಕೂಟದ ಅಧ್ಯಕ್ಷರಾದ ವಿಜಯೇಂದ್ರ ಕುಮಾರ್ ಭಂಡಾರಿ ಹೆಬ್ಬಾರಬೈಲು, ಕಾವು ಹೇಮನಾಥ್ ಶೆಟ್ಟಿ, ಉಪಾಧ್ಯಕ್ಷ ರಾಜೇಶ್ ಆಳ್ವ, ಮುಲ್ಕಿ ಕರುಣಾಕರ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲು ಉಪಸ್ಥಿತರಿದ್ರು.

Related posts

Leave a Reply

Your email address will not be published. Required fields are marked *