Header Ads
Breaking News

ಜೂನ್ 22ರಂದು ಪಡುಬಿದ್ರಿ ಬಂಟರ ಸಂಘದ ವತಿಯಿಂದ”ಬಿರ್ದ್” ಸರಣಿ ಸಾಂಸ್ಕೃತಿಕ ಕಾರ್ಯಕ್ರಮ

ಪಡುಬಿದ್ರಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಸರಣಿ ಸಾಂಸ್ಕೃತಿಕ ಕಾರ್ಯಕ್ರಮ “ಬಿರ್ದ್” ಎಂಬ ಹೆಸರಲ್ಲಿ ನಡೆಯಲಿದ್ದು, ಈ ಅದ್ಧೂರಿಯ ಕಾರ್ಯಕ್ರಮವನ್ನು ವಿವಿಧ ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ ಪ್ರಮುಖರ ಉಪಸ್ಥಿತಿಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ| ಎಂ, ಮೋಹನ್ ಆಳ್ವ ಉದ್ಘಾಟಿಸಲಿದ್ದಾರೆ ಎಂಬುದಾಗಿ ಮಾತೃ ಸಂಸ್ಥೆಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿದ್ದಾರೆ.

ಸಂಸ್ಥೆಯ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಡುಬಿದ್ರಿ ಬಂಟರ ಸಂಘ ಎಂಬುದು ಕೇವಲ ಉಳ್ಳವರ ಸಂಘ ಎಂಬಂತ್ತಿರ ಬಾರದು, ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವಿಗೆ ನಮ್ಮೀ ಸಂಸ್ಥೆ ಸ್ಪಂಧಿಸುವ ನಿಟ್ಟಿನಲ್ಲಿ ಪ್ರತೀ ಗ್ರಾಮಗಳಲ್ಲೂ ಸಭೆ ನಡೆಸಿ ಸಮಾಜದ ಕುಂದು ಕೊರತೆಗಳನ್ನು ಆಲಿಸಿ ಬಡ ಕುಟುಂಬಗಳಿಗೆ ವಿವಿಧ ರೀತಿಯಲ್ಲಿ ದಾನಿಗಳ ಸಹಕಾರದಿಂದ ನಿರಂತರವಾಗಿ ಸಹಾಯ ಹಸ್ತ ನೀಡಲಾಗುವುದು, ಅದಲ್ಲದೆ ಸಮಾಜದ ಯುವ ಪ್ರತಿಭೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಸರಣಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭ ಸಮಾಜದ ಯಕ್ಷ ಪ್ರತಿಭೆ ಪಟ್ಲ ಸತೀಶ್ ಶೆಟ್ಟಿ ಹಾಗೂ ಕಾವ್ಯಶ್ರೀ ಅಜೇರು ಇವರ ದ್ವಂದ್ವ ಹಾಡುಗಾರಿಕೆಯೊಂದಿಗೆ ಪ್ರಸಿದ್ಧ ಕಲಾವಿಧರ ಕೂಡುವಿಕೆಯಿಂದ ಯಕ್ಷಗಾನ ದಾಳಮದ್ದಳೆ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಪ್ರಕಾಶ್ ಶೆಟ್ಟಿ ಪಡುಹಿತ್ಲು, ರವಿ ಶೆಟ್ಟಿ ಗುಂಡ್ಲಾಡಿ, ಇನ್ನಾ ಉದಯ ಕುಮಾರ್ ಶೆಟ್ಟಿ, ಶೋಭ ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *