Header Ads
Breaking News

ಜೆಡಿಎಸ್‍ನ ಹಿರಿಯ ನಾಯಕ ಮಾಜಿ ಸಚಿವ, ಅಮರನಾಥ ಶೆಟ್ಟಿ ವಿಧಿವಶ

ಮೂಡುಬಿದಿರೆ: ರಾಜ್ಯದ ಮಾಜಿ ಸಚಿವ, ಜಾತ್ಯತೀತ ಜನತಾ ದಳ ಮುಖಂಡ, ಹಿರಿಯ ರಾಜಕಾರಣಿ ಕೆ. ಅಮರನಾಥ ಶೆಟ್ಟಿ (80) ಇಂದು ಮುಂಜಾನೆ ನಿಧನರಾಗಿದ್ದಾರೆ. ಮೂಡಬಿದರೆಯವರಾದ ಇವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಸರಳ ಸಜ್ಜನಿಕೆಯ ವ್ಯಕ್ತಿತಯಾಗಿದ್ದ ಇವರು ಕಾರ್ಕಳ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ನಂತರ ಮೂಡಬಿದಿರೆ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಾರ್ಕಳ ತಾಲೂಕು ಮಾರುಕಟ್ಟೆ ಸೊಸೈಟಿ ಅಧ್ಯಕ್ಷ, ಸಹಕಾರಿ ಸೇವಾ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಪ್ರವಾಸೋದ್ಯಮ ಮತ್ತು ಮುಜರಾಯಿ ಸಚಿವರಾಗಿದ್ದರು.

Related posts

Leave a Reply

Your email address will not be published. Required fields are marked *