Header Ads
Breaking News

ಜ.15ರಂದು ಅಡ್ಯಾರ್ ಕಣ್ಣೂರಿನಲ್ಲಿ ಪೌರತ್ವ ಕಾಯ್ದೆ ವಿರುದ್ಧ ಬೃಹತ್ ಜನಜಾಗೃತಿ ಸಮಾವೇಶ

ಪುತ್ತೂರು : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಿಎಎ, ಎಂಪಿಆರ್ ಮತ್ತು ಎನ್‍ಆರ್ಸಿ ಕಾಯ್ದೆಗಳನ್ನು ವಿರೋಧಿಸಿ ಜ.15ರಂದು ಮಂಗಳೂರಿನ ಅಡ್ಯಾರ್ ಕಣ್ಣೂರಿನ ತಹಾ ಗಾರ್ಡನ್ ಮೈದಾನದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಬೃಹತ್ ಜನಜಾಗೃತಿ ಸಮಾವೇಶ ನಡೆಯಲಿದ್ದು, ಪುತ್ತೂರು ಭಾಗದಿಂದ 10ಸಾವಿರಕ್ಕೂ ಅಧಿಕ ಮಂದಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ದ.ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಕಾರ್ಯದರ್ಶಿಯಾದ ವಕೀಲ ನೂರುದ್ದೀನ್ ಸಾಲ್ಮರ ಅವರು ತಿಳಿಸಿದರು.

ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅವಳಿ ಜಿಲ್ಲೆಗಳ ಎಲ್ಲಾ ಜಮಾಅತ್ ಗಳನ್ನೊಳಗೊಂಡ ದ.ಕ.ಮತ್ತು ಉಡುಪಿ ಮುಸ್ಲಿಂ ಸೆಂಟ್ರಲ್ಯ ನೇತೃತ್ವದಲ್ಲಿ 28 ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆಯುವ ಬೃಹತ್ ಜನಜಾಗೃತಿ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ನಾಗರಿಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಪುತ್ತೂರು ಕೇಂದ್ರ ಜುಮ್ಮಾ ಮಸ್ಜಿದ್ ಅಧ್ಯಕ್ಷ ಎಲ್.ಟಿ.ಅಬ್ದುಲ್ ರಝಾಕ್ ಹಾಜಿ, ವೆಲ್ಫೇರ್ ಪಾರ್ಟಿಯ ಜಿಲ್ಲಾಧ್ಯಕ್ಷ ಸುಲೈಮಾನ್ ಉಪ್ಪಿನಂಗಡಿ ನಾಗರಿಕ ಹಿತರಕ್ಷಣಾ ವೇದಿಕೆಯ ಸಂಚಾಲಕ ಅಬ್ದುಲ್ ರಹಿಮಾನ್ ಯುನಿಕ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *