Header Ads
Breaking News

ಜ.19ರಂದು ಶ್ರೀಕ್ಷೇತ್ರ ಗುಡ್ಡಮ್ಮಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

ಸರ್ಕಾರ ಹೊರಡಿಸಿರುವ ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ಶ್ರೀಕ್ಷೇತ್ರ ಗುಡ್ಡಮ್ಮಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಹಾಗೂ ನಾಗಮಂಡಲೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಜನವರಿ 19ರ ಮಂಗಳವಾರ ಗುಡ್ಡಮ್ಮಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ನಡೆಯಲಿದ್ದು, ಕಲಾಭಿವೃದ್ದಿ ಹೋಮ, ಹಣ್ಣುಕಾಯಿ, ಪಂಚಕಜ್ಜಾಯ, ಬಾಳೆಗೊನೆ ಅರ್ಪಿಸುವುದು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಗಳು ನಡೆಯಲಿದೆ. ಬುಧವಾರ ಬೆಳಿಗ್ಗೆ 8 ಗಂಟೆಗೆ ನಾಗಮಂಡಲೋತ್ಸವ ನಡೆಯಲಿದೆ. ಕೋವಿಡ್ ನಿಯಮಾವಳಿಗಳಿರುವುದರಿಂದ ಕೆಲ ಧಾರ್ಮಿಕ ಕಾರ್ಯಕ್ರಮಗಳನ್ನು ಕೈಬಿಡಲಾಗಿದ್ದು ಅನ್ನಪ್ರಸಾದ ವಿತರಣೆ ಸೇರಿದಂತೆ ಇನ್ನಿತರ ಕೆಲ ಧಾರ್ಮಿಕ ಕಾರ್ಯಕ್ರಮಗಳನ್ನು ಕೈಬಿಡಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ.

Related posts

Leave a Reply

Your email address will not be published. Required fields are marked *