Header Ads
Header Ads
Breaking News

ಜ.20ರಂದು ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರ ಪುನರ್ ನಿರ್ಮಾಣ ಬಾಲಾಲಯ ಪ್ರತಿಷ್ಠೆ, ವಿಜ್ಞಾಪನಾ ಪತ್ರ ಬಿಡುಗಡೆ

ಬಂಟ್ವಾಳ: ಬಂಟ್ವಾಳದ ಕಸಬಾ ಗ್ರಾಮದಲ್ಲಿರುವ ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರವನ್ನು ಪುನರ್ ನಿರ್ಮಿಸಲು ಸಂಕಲ್ಪಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಜ.20ರಂದು ಬಾಲಾಲಯ ಪ್ರತಿಷ್ಠೆ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ ನಡೆಯಲಿದೆ ಎಂದು ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಹರೀಶ್ ಕೋಟ್ಯಾನ್ ತಿಳಿಸಿದ್ದಾರೆ.

ಸೋಮವಾರ ಬಿ.ಸಿ.ರೋಡಿನ ಪ್ರೆಸ್ ಕ್ಲಬ್‍ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜ.19ರಂದು ವಿವಿಧ ವೈಧಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು. ಜ. 20ರಂದು ಬೆಳಿಗ್ಗೆ 8-32ಕ್ಕೆ ಶ್ರೀ ಮಹಮ್ಮಾಯಿ ದೇವರ ಬಾಲಾಲಯ ಪ್ರತಿಷ್ಠೆ, ಐಕ್ಯಮತ್ಯ ಹೋಮ ಮತ್ತು 108ಕಾಯಿ ಗಣಯಾಗ ನಡೆಯಲಿದ್ದು, ಬಳಿಕ ಶಾಸಕ ರಾಜೇಶ್ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶ್ರೀರ್ವಚನ ನೀಡುವರು. ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ದೀಪ ಪ್ರಜ್ವಲನ ಮಾಡುವರು. ಮಾಜಿ ಸಚಿವ ಬಿ.ರಮಾನಾಥ ರೈ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸುವರು. ಜ್ಯೋತಿಷ್ಯ ವಿದ್ವಾನ್ ಸತೀಶ್ ಪಣಿಕ್ಕರ್, ಪುರೋಹಿತರಾದ ಕೇಶವ ಶಾಂತಿ ನಾಟಿ, ಉಧ್ಯಮಿ ಸಂತೋಷ್ ಕುಮಾರ್ ಕೊಟ್ಟಿಂಜ, ಶ್ರೀ ಕ್ಷೇ. ಧ.ಗ್ರಾ. ಯೋ.ಯ ಬಂಟ್ವಾಳ ಯೋಜನಾಧಿಕಾರಿ ಜಯಾನಂದ್, ಪುರಸಭಾ ಸದಸ್ಯರಾದ ವಾಸು ಪೂಜಾರಿ ಲೊರೆಟ್ಟೊ, ಮೀನಾಕ್ಷಿ, ಗಂಗಾಧರ ಪೂಜಾರಿ, ಜನಾರ್ಧನ ಚೆಂಡ್ತಿಮಾರು, ದೇವಕಿ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಅನುವಂಶಿ ಆಡಳಿತ ಮೊಕ್ತೇಸರ ಅರುಣ್ ಕುಮಾರ್ ,ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳಾದ ನಾಗೇಶ್ ದರ್ಬೆ,ಜಯಶಂಕರ್ ಕಾನ್ಸಾಲೆ,ಭಾಸ್ಕರ ಅಜೆಕಲ,ಮಚ್ಚೇಂದ್ರ ಸಾಲಿಯಾನ್, ಗೋಪಾಲ ಅಂಚನ್ ಮೊದಲಾದವರು ಹಾಜರಿದ್ದರು.

 

Related posts

Leave a Reply