
ವಿಟ್ಲ: ಸಾಲೆತ್ತೂರು ನವಚೇತನ ಯುವಕ ಮಂಡಲ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಶಿವಪಂಚಾಕ್ಷರಿ ಪಾರಾಯಣ, ಅಖಂಡ ಭಜನಾ ಸಪ್ತಾಹ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಜ.26ರಿಂದ ಫೆ.3ರ ವರೆಗೆ ನಡೆಯಲಿದೆ ಎಂದು ಅಧ್ಯಕ್ಷ ಸೋಮನಾಥ ಪಾಲ್ತಾಜೆ ಹೇಳಿದರು.
ಅವರು ವಿಟ್ಲದಲ್ಲಿ ಕರೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ ಜ.26ರಂದು ಬೆಳಿಗ್ಗೆ ಗಣಪತಿ ಹೋಮ, ಬೆಳಿಗ್ಗೆ ಸೂರ್ಯೋದಯದಿಂದ ಸಂಜೆ ಸೂರ್ಯಸ್ತದ ವರೆಗೆ ಸಾಮೂಹಿಕ ಶಿವಪಂಚಾಕ್ಷರಿ ಪಾರಾಯಣ ನಡೆಯಲಿದೆ. 27ರಂದು ಬೆಳಿಗ್ಗೆ ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಅಖಂಡ ಭಜನಾ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಬಳಿಕ ವಿವಿಧ ಸಂಘಗಳಿಂದ ಭಜನೆ ನಡೆಯಲಿದೆ.
ಜ. 30ರಂದು ನಡೆಯುವ ಧಾರ್ಮಿಕ ಸಮಾರೋಪ ಸಮಾರಂಭದಲ್ಲಿ ಶ್ರೀಧಾಮ ಮಾಣಿಲ ಮಹಾಲಕ್ಷ್ಮೀ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ವೆಂಕಪ್ಪ ಶೆಟ್ಟಿಗಾರ್ ಪಾಲ್ತಾಜೆ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಬಿ ಶೆಟ್ಟಿಗಾರ್ ಅಗರಿ, ಕೋಶಾಧಿಕಾರಿ ಶೇಖರ ಪೂಜಾರಿ ಮಾವೆ, ಗೌರವ ಸಲಹೆಗಾರ ಶಂಕರ್ ಶೆಟ್ಟಿಗಾರ್ ಮಾವೆ ಉಪಸ್ಥಿತರಿದ್ದರು.