Header Ads
Header Ads
Breaking News

ಜ.5ರಂದು ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳ

ಕರಾವಳಿಯ ಅತ್ಯಂತ ಪ್ರಸಿದ್ಧ ಕಾರ್ಕಳ ತಾಲೂಕಿನ ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳ ಜ. 5ರಂದು ನಡೆಯಲಿದ್ದು, ಅಂದು ಬೆಳಿಗ್ಗೆ 8 ಗಂಟೆಗೆ ಕಂಬಳ ಮಹೋತ್ಸವದ ಉದ್ಘಾಟನೆ ನಡೆಯಲಿದೆ ಎಂದು ಶಾಸಕ, ಮಿಯ್ಯಾರು ಕಂಬಳ ಸಮಿತಿಯ ಅಧ್ಯಕ್ಷ ವಿ. ಸುನಿಲ್ ಕುಮಾರ್ ಅವರು ಜ. 1ರಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಅಂದು ಸಂಜೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲ, ಮಾಜಿ ಮುಖ್ಯಮಂತ್ರಿ ಡಾ| ಎಂ. ವೀರಪ್ಪ ಮೊಲಿ, ವಿಧಾನ ಪರಿಷತ್ ವಿರೋಧ ಪಕ್ಷದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಉಭಯ ಜಿಲ್ಲೆಯ ಜನಪ್ರತಿನಿಽಗಳು ಭಾಗವಹಿಸಿಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಗಣ್ಯರು ಉಪಸ್ಥಿತರಿರುವರು ಎಂದರು.
ಕಂಬಳಕ್ಕೆ ಬೇಕಾದ ಪೂರ್ವಸಿದ್ದತೆಗಳು ಈಗಾಗಲೇ ನಡೆಯುತ್ತಿದೆ. ಷರತ್ತು ಪ್ರಕಾರ ಎಚ್ಚರಿಕೆಯಿಂದಲೇ ಕಂಬಳ ನಡೆಯಲಿದೆ. 150ಕ್ಕೂ ಅಧಿಕ ಜತೆ ಕೋಣಗಳು ಭಾಗವಹಿಸಲಿವೆ. ಜ. 5ರಂದು ಪೂರ್ವಾಹ್ನ ಬಹುಮಾನ ವಿತರಣೆ ನಡೆಯಲಿದೆ. ಸಾರ್ವಜನಿಕರು ಕಂಬಳದ ಯಶಸ್ಸಿಗೆ ಸಹಕರಿಸಬೇಕು ಎಂದು ತಿಳಿಸಿದರು.

ಸುದ್ದಿ ಗೋಷ್ಠಿಯಲ್ಲಿ ಕಂಬಳ ಸಮಿತಿಯ ಕೋಶಾಧ್ಯಕ್ಷ ಜೀವನ್‌ದಾಸ್ ಅಡ್ಯಂತಾಯ, ಸಂಘಟನಾ ಕಾರ್ಯದರ್ಶಿ ಪ್ರೊ| ಕೆ. ಗುಣಾಪಾಲ ಕಡಂಬ, ಭಾಸ್ಕರ ಎಸ್. ಕೋಟ್ಯಾನ್, ಸುರೇಶ್ ಕೆ.ಪೂಜಾರಿ ಉಪಸ್ಥಿತರಿದ್ದರು.

Related posts

Leave a Reply