Header Ads
Header Ads
Breaking News

ಜ.7ರಂದು ಮುಖ್ಯಮಂತ್ರಿ ಮೂಡುಬಿದಿರೆಗೆ 79.44 ಕೋಟಿ ಕಾಮಗಾರಿಗಳಿಗೆ ಶಿಲಾನ್ಯಾಸ, ಶಂಕು ಸ್ಥಾಪನೆ ಮೂಡಬಿದರೆಯಲ್ಲಿ ಶಾಸಕ ಅಭಯಚಂದ್ರ ಜೈನ್ ಮಾಹಿತಿ

ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜ.7ರಂದು ಮೂಡುಬಿದಿರೆಗೆ ಆಗಮಿಸುತ್ತಿದ್ದು, ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 79.44 ಕೋಟಿ ವೆಚ್ಚ ಅನುದಾನದಲ್ಲಿ ನಿರ್ಮಾಣಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆಯನ್ನು ಸಾಯಂಕಾಲ 4 ಗಂಟೆಗೆ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನೆರವೇರಿಸಲಿದ್ದಾರೆ ಎಂದು ಶಾಸಕ ಕೆ. ಅಭಯಚಂದ್ರ ಜೈನ್ ತಿಳಿಸಿದ್ದಾರೆ.

ಅವರು ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾತನಾಡಿದರು. ವರ್ತುಲ ರಸ್ತೆ, ಸ್ಕೇಟಿಂಗ್ ರಿಂಕ್, ಮೆಸ್ಕಾಂ ಉಪ ವಿಭಾಗ ಕಛೇರಿ, ರೈತ ಸಂಪರ್ಕ ಕೇಂದ್ರ, ಬಸದಿ ಕೆರೆ ಸಹಿತ ವಿವಿಧ ರಸ್ತೆ ಕಾಮಗಾರಿಗಳಿಗೆ ಉದ್ಘಾಟನೆ ಸಹಿತ ಶಿಲಾನ್ಯಾಸಗಳು ನಡೆಯಲಿವೆ.

ಸಮಾರಂಭದ ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ರಮಾನಾಥ ರೈ, ಆಹಾರ ಹಾಗೂ ನಾಗರಿಕಾ ಸರಬರಾಜು ಸಚಿವ ಯು.ಟಿ ಖಾದರ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಹೆಚ್.ಕೆ ಪಾಟೀಲ್, ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಟಿ.ಬಿ ಜಯಚಂದ್ರ, ಲೋಕಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ, ಇಂಧನ ಸಚಿವ ಡಿ.ಕೆ ಶಿವಕುಮಾರ್, ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಈಶ್ವರ ಬಿ. ಖಂಡ್ರೆ, ಮುಖ್ಯ ಅತಿಥಿಯಾಗಿರುವರು ಎಂದರು.

ಮೂಡ ಅಧ್ಯಕ್ಷ ಸುರೇಶ್ ಪ್ರಭು, ಪುರಸಭಾ ಸದಸ್ಯ ಸುರೇಶ್ ಕೋಟ್ಯಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Related posts