Header Ads
Header Ads
Header Ads
Breaking News

ಟಿಪ್ಪು ಜಯಂತಿ ಆಚರಣೆ ಕೈಬಿಡುವಂತೆ ಒತ್ತಾಯ ರಾಜ್ಯ ಸರಕಾರಕ್ಕೆ ಭಟ್ಕಳ ಹಿಂದೂ ಪರಿಷತ್ ವತಿಯಿಂದ ಮನವಿ

ಹಿಂದೂ ವಿರೋಧಿ ಹಾಗೂ ರಾಷ್ಟ್ರ ವಿರೋಧಿ ಟಿಪ್ಪು ಸುಲ್ತಾನಿನ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವ ನಿರ್ಣಯವನ್ನು ಕರ್ನಾಟಕ ಸರ್ಕಾರವು ಈ ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ ಭಟ್ಕಳ ಶ್ರೀ ರಾಮಸೇನೆ, ಶ್ರೀ ಭುವನೇಶ್ವರಿ ಸಂಘ, ಹಿಂದು ಜನ ಜಾಗೃತಿ ಸಮಿತಿ, ಆರ್.ಎಸ್.ಎಸ್. ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ರಾಜ್ಯಪಾಲರಿಗೆ ಸಹಾಯಕ ಆಯುಕ್ತರ ಮೂಲಕ ಮನವಿಯನ್ನು ಸಲ್ಲಿಸಲಾಯಿತು. ಸಹಾಯಕ ಆಯುಕ್ತರ ಅನುಪಸ್ಥಿತಿಯಲ್ಲಿ ಅಧಿಕಾರಿ ಎಲ್.ಎ.ಭಟ್ಟ ಮನವಿ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಶ್ರೀ ರಾಮ ಸೇನೆಯ ಮುಖಂಡ ಜಯಂತ ನಾಯ್ಕ, ಸೇರಿದಂತೆ ಮುಂತಾದವರು ಇದ್ದರು.

ವರದಿ: ರಾಘವೇಂದ್ರ ಮಲ್ಯ ಭಟ್ಕಳ

Related posts

Leave a Reply