Header Ads
Header Ads
Breaking News

ಟಿಪ್ಪು ಸುಲ್ತಾನ್ ಜಯಂತಿ ಆಚರಣೆ:ಸಚಿವ ಯು.ಟಿ. ಖಾದರ್ ಸಹಿತ ಹಲವು ಗಣ್ಯರು ಗೈರು

ಮಂಗಳೂರಿನಲ್ಲಿ ಭಾರೀ ವಿರೋಧದ ನಡುವೆಯೂ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲಾಯಿತು. ದ,ಕ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಮಂಗಳೂರಿನ ಜಿಲ್ಲಾ ಪಂಚಾಯತ್ ಕಚೇರಿಯ ನೇತ್ರಾವತಿ ಸಭಾಂಗಣದಲ್ಲಿ ಟಿಪ್ಪುಸುಲ್ತಾನ್ ಜಯಂತಿಯನ್ನು ಆಚರಿಸಲಾಯಿತು. ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಅನೇಕ ದಾರ್ಶನಿಕರ ಜಯಂತಿಯನ್ನು ಆಚರಿಸಿಕೊಂಡು ಬರುತ್ತಿದ್ದೇವೆ. ಅದಂತೆ ಟಿಪ್ಪು ಜಯಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಟಿಪ್ಪು ಸುಲ್ತಾನ್ ಮೈಸೂರಿನ ಹುಲಿ ಎಂದೇ ಪ್ರಖ್ಯಾತರಾಗಿದ್ದರು. ಮೈಸೂರಿನ ಹುಲಿ ಎಂದು ಕರೆಸಿಕೊಂಡು ಸ್ವಾತಂತ್ರ್ಯ ಹೋರಾಟ ಮಾಡಿದ ಅಪ್ರತಿಮ ವೀರ ಎಂದು ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಹಾಜರಿದ್ದವರಿಗಿಂತ ಗೈರುಹಾಜರಾಗಿದ್ದವರ ಸಂಖ್ಯೆಯೇ ಅಧಿಕವಾಗಿತ್ತು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ದ,.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಮಂಗಳೂರು ಪಾಲಿಕೆ ಮೇಯರ್ ಭಾಸ್ಕರ್ ಕೆ., ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಂಶುಪಾಲ ಡಾ.ಎಂ.ಎ. ಉದಯ್ ಕುಮಾರ್‌ಪೊಲೀಸ್ ಆಯುಕ್ತ ಟಿ.ಆರ್.ಸುರೆಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್.ರವಿಕಾಂತೇಗೌಡ, ಜಿಲ್ಲಾ ಪಂಚಾಯತ್ ಸಿಇಒ ಡಾ.ಸೆಲ್ವಮಣಿ ಆರ್., ಪಾಲಿಕೆ ಆಯುಕ್ತ ಮಹಮ್ಮದ್ ನಝೀರ್, ತಹಶೀಲ್ದಾರ್ ಟಿ.ಜಿ. ಗುರುಪ್ರಸಾದ್ ಮತ್ತಿತರರು ಹಾಜರಿದ್ದರೆ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ವಿಧಾನಪರಿಷತ್ ಸದಸ್ಯರಾದ ಕೆ.ಪ್ರತಾಪ್ ಚಂದ್ರ ಶೆಟ್ಟಿ, ಎಸ್.ಎಲ್.ಭೋಜೇಗೌಡ ಮತ್ತಿತರ ಗಣ್ಯರು ಗೈರುಹಾಜರಾಗಿದ್ದರು. 

Related posts

Leave a Reply