Header Ads
Header Ads
Header Ads
Breaking News

ಸಹ್ಯಾದ್ರಿ ಸಯನ್ಸ್ ಟ್ಯಾಲೆಂಟ್ ಹಂಟ್-2017 ಸಹ್ಯಾದ್ರಿ ಆವರಣದಲ್ಲಿ ಪ್ರತಿಭಾನ್ವೇಷಣಾ ಸ್ಪರ್ಧೆ ನ.11 ರಂದು ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಆಯೋಜನೆ

ವಿಜ್ಞಾನದ ಅನ್ವೇಷಣೆ ಕಡೆಗೆ ಯುವಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಮಂಗಳೂರು ಇದರ ವತಿಯಿಂದ ನ.೧೧ರಂದು ಪಿಯುಸಿ ಮತ್ತು ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಸಹ್ಯಾದ್ರಿ ಸೈಯನ್ಸ್ ಟ್ಯಾಲೆಂಟ್ ಹಂಟ್ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ. ಉಮೇಶ್ ಭೂಷಿ ಸ್ಪರ್ಧೆಯು ವಿಜ್ಞಾನ ಮತ್ತು ತಂತ್ರಜ್ಞಾನ ಮಾಡೆಲ್‌ಗಳು ಹಾಗೂ ಪ್ರಾತ್ಯಕ್ಷಿಕೆ ಪ್ರದರ್ಶನದ ಕಾರ್ಯಕ್ರಮವನ್ನು ಒಳಗೊಂಡಿದೆ. ಅಂತಿಮ ಬಹುಮಾನಗಳು ನಗದು, ಟ್ರೋಫಿ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ.

ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮಂಜುನಾಥ ಭಂಡಾರಿಯವರ ಮುಂದಾಳತ್ವದಲ್ಲಿ ನಡೆಯಲಿರುವ ಈ ಸ್ಪರ್ಧೆಯು ಯುವ ಮನಸ್ಸುಗಳನ್ನು ವಿಜ್ಞಾನ, ತಂತ್ರಜ್ಞಾನ ಕಡೆಗೆ ಉತ್ತೇಜಿಸುವ ನಿಟ್ಟಿನಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದ ಪಿಯು ಮತ್ತು ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಡಾ. ಮಂಜುನಾಥ, ಸುಂದರ್, ವಸಂತ ಕೇದಿಗೆ ಉಪಸ್ಥಿತರಿದ್ದರು.

ವರದಿ: ನಾಗರಾಜ್ ಮಂಗಳೂರು.

Related posts

Leave a Reply