Header Ads
Header Ads
Breaking News

ಡಾ. ಅಬ್ದುಲ್ ಕಲಾಂ ಸಹಿ ಫೋರ್ಜರಿ ಪ್ರಕರಣ : ಆರೋಪಿಗೆ 3ವರ್ಷ ಜೈಲು ಶಿಕ್ಷೆ

ಕಳೆದ ಎಂಟು ವರ್ಷಗಳ ಹಿಂದೆ ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಸಹಿಯನ್ನು ಫೋರ್ಜರಿ  ಮಾಡಿ ಅವರ ವ್ಯಕ್ತಿತ್ವ ಮತ್ತು ಗೌರವಕ್ಕೆ ಧಕ್ಕೆ ಉಂಟು ಮಾಡಿರುವ ಆರೋಪಿಗೆ ಉಡುಪಿ ಹೆಚ್ಚುವರಿ ಜೆಎಂಎಫ್‍ಸಿ ನ್ಯಾಯಾಲಯವು ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಶಿಕ್ಷೆಗೆ ಗುರಿಯಾದ ಆರೋಪಿ ಕೊಡವೂರು ಗ್ರಾಮದ ಮೂಡಬೆಟ್ಟು ನಿವಾಸಿ ನಿರಂಜನ್ ಚಿದಾನಂದ ಭಟ್. 2010ರಲ್ಲಿ ಈತ ತಾನೇ ಭಾರತ ದೇಶದ ರಾಷ್ಟ್ರಪತಿ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಎಂದು ವ್ಯವಹರಿಸಿ ರಾಷ್ಟ್ರಪತಿಯ ವ್ಯಕ್ತಿತ್ವ ಮತ್ತು ಗೌರವಕ್ಕೆ ಧಕ್ಕೆ ಉಂಟು ಮಾಡಿದ್ದ. ತನ್ನ ಮನೆಯಲ್ಲಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಸಹಿಯನ್ನು ನಕಲಿ ಮಾಡಿ, ನಕಲಿ ದಾಖಲೆಗಳನ್ನು ಸೃಷ್ಠಿಸಿದ್ದ.

ಈ ಪ್ರಕರಣದ ವಿಚಾರಣೆ ನಡೆಸಿದ ಉಡುಪಿ ಹೆಚ್ಚುವರಿ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್ ಎಂ.ಎಸ್., ಸಾಕ್ಷಿದಾರರ ಸಾಕ್ಷ್ಯ, ದಾಖಲೆಗಳು ಹಾಗೂ ವಾದವನ್ನು ಆಲಿಸಿ ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿದರು. ಅದರಂತೆ ನ್ಯಾಯಾಧೀಶರು, ಆರೋಪಿ ನಿರಂಜನ್ ಚಿದಾನಂದ ಭಟ್‍ಗೆ ಭಾರತೀಯ ದಂಡ ಸಂಹಿತೆ ಕಲಂ 419, 465, 468, 469, 471ರಡಿ ಮೂರು ವರ್ಷ ಕಠಿಣ ಶಿಕ್ಷೆ ಮತ್ತು 7ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Related posts

Leave a Reply