Header Ads
Header Ads
Breaking News

ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜು ಕ್ರೀಡೋತ್ಸವ ದಿನ : ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಉದ್ಘಾಟನೆ

ಮಂಗಳೂರಿನ ಡಾ. ನಿಟ್ಟೆ ಶಂಕರ ಅಡ್ಯಂತಾಯ ಮೆಮೋರಿಯಲ್ ಪಿಯು ಕಾಲೇಜಿನ ವಾರ್ಷಿಕ ಕ್ರೀಡೋತ್ಸವವು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆಯಿತು.
ಮಂಗಳಾ ಸ್ಟೇಡಿಯಂನಲ್ಲಿ ನಡೆದ ಕ್ರೀಡೋತ್ಸವಕ್ಕೆ ಲಯನ್ಸ್ ಜಿಲ್ಲಾ 317ಡಿ ಇದರ ಜಿಲ್ಲಾ ಗವರ್ನರ್ ಲಯನ್ ವಸಂತಕುಮಾರ್ ಶೆಟ್ಟಿ ಅವರು ಬಲೂನ್ ಹಾರಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಬಳಿಕ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಇದೇ ವೇಳೆ ಪಥಸಂಚನಲದ ಗೌರವ ವಂದನೆಯನ್ನು ಅತಿಥಿಗಳು ಸ್ವೀಕರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಲಯನ್ ವಸಂತಕುಮಾರ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಅವರು ಕ್ರೀಡೆಯಲ್ಲಿ ಭಾಗವಹಿಸುತ್ತಿದ್ದೇವೆ ಎಂಬ ಉತ್ಸಾಹವೇ ನಮ್ಮ ಜೀವನದಲ್ಲಿ ಮುಂದೆ ಬರಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಆನಂತರ ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಶೆಟ್ಟಿ ಕೆ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾಕೂಟಗಳು ನಡೆದವು.ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ವಿದ್ಯಾಧರ್ ಟಾಕೂರ್, ಸ್ಫೋರ್ಟ್ಸ್ ಸೆಕ್ಯೂರಿಟಿ ಶಶಾಂಕ್, ಉಪ ಪ್ರಾಂಶುಪಾಲರಾದ ಅನ್ನಪೂರ್ಣ, ಉಪಾನ್ಯಾಸಕರಾದ ಸುಮನ, ದಿವ್ಯಾ ಶೆಟ್ಟಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *