Header Ads
Header Ads
Breaking News

ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪಿಯು ಕಾಲೇಜಿನ ವಾರ್ಷಿಕೋತ್ಸವ

ದೇರಳಕಟ್ಟೆಯ ನಿಟ್ಟೆ ಪರಿಗಣಿಸಲಾಗಿರುವ ವಿವಿಯ ಕ್ಯಾಂಪಸ್ ನ ಕೆ.ಎಸ್. ಹೆಗ್ಡೆ ಆಡಿಟೋರಿಯಂನಲ್ಲಿ ನಡೆದ ನಿಟ್ಟೆ ವಿವಿ ಅಧೀನದ ಮಂಗಳೂರಿನ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು.ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಡಿಟೋರಿಯಂನಲ್ಲಿ ನಡೆದ ನಿಟ್ಟೆ ವಿವಿ ಅಧೀನದ ಮಂಗಳೂರಿನ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ2018-19ರ ಪ್ರತಿಭಾನ್ವಿತರಿಗೆ ನಿಟ್ಟೆ ವಿಶ್ವವಿದ್ಯಾಲಯದ ಕುಲಸಚಿವೆ ಪ್ರೊ. ಡಾ.ಅಲ್ಕಾ ಕುಲಕರ್ಣಿ ಪ್ರಶಸ್ತಿ ವಿತರಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಜ್ಞಾನ ಸಂಪಾದಿಸುವುದರ ಜೊತೆಗೆ ಶಿಸ್ತು, ಕಲಿಕೆಯಲ್ಲಿ ಮೆರೆಯುವುದರ ಜೊತೆಗೆ ಸಮಯದ ಮೌಲ್ಯ ಅರಿತುಕೊಳ್ಳಬೇಕು. ಕಾಲೇಜಿನ ವತಿಯೊಂದು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿ ಜೀವನ ಸಾರ್ಥಕವಾಗುತ್ತದೆ. ಮನಸ್ಸು ಸದಾ ಸಂತಸವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಪ್ರೊ. ಟಿ. ಶಂಕರ ನಾರಾಯಣ ಭಟ್ ಭಟ್, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪೂಜಾ ಶೆಟ್ಟಿ, ಉಪ ಪ್ರಾಂಶುಪಾಲೆ ಅನ್ನಪೂರ್ಣ ನಾಯ್ಕ್, ಉಪನ್ಯಾಸಕಿ ದಿವ್ಯ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಂಕಿತ್ ಶೆಟ್ಟಿ ಉಪಸ್ಥಿತರಿದ್ದರು.

Related posts

Leave a Reply