Header Ads
Header Ads
Breaking News

ಡಾ. ಶಾಂತಾರಾಮ್ ಶೆಟ್ಟಿಗೆ ಕರಾವಳಿ ಗೌರವ ಪ್ರಶಸ್ತಿ ಕರಾವಳಿ ಉತ್ಸವ ಸಮಾರೋಪದಲ್ಲಿ ಪ್ರದಾನ ಪಣಂಬೂರ್ ಬೀಚ್‌ನಲ್ಲಿ ನಡೆದ ಕಾರ್ಯಕ್ರಮ

ಈ ಬಾರಿಯ ಕರಾವಳಿ ಉತ್ಸವ ಗೌರವ ಪ್ರಶಸ್ತಿಯನ್ನು ಖ್ಯಾತ ಮೂಳೆ ತಜ್ಞ ಡಾ. ಶಾಂತಾರಾಮ್ ಶೆಟ್ಟಿ ಅವರಿಗೆ ನೀಡಿ ಗೌರವಿಸಲಾಯಿತು. ಮಂಗಳೂರಿನ ಪಣಂಬೂರು ಬೀಚ್‌ನಲ್ಲಿ ನಡೆದ ಕರಾವಳಿ ಉತ್ಸವ ಸಮಾರೋಪದಲ್ಲಿ ಖ್ಯಾತ ಮೂಳೆ ತಜ್ಞ ಡಾ. ಶಾಂತಾರಾಮ್ ಶೆಟ್ಟಿಯವರಿಗೆ ಕರಾವಳಿ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದೇ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಂತಿ ನೆಮ್ಮದಿ ನೆಲೆಸಿದಾಗ ದೇಶದಲ್ಲಿ ಮಂಗಳೂರು ನಂಬರ್ ವನ್ ಆಗುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು ಅನಂತರ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಡಾ. ಶಾಂತಾರಾಮ್ ಶೆಟ್ಟಿ ಅವರಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಸಂದಿದೆ ಎಂದರು.

ಈ ಸಂದರ್ಭ ಶಾಸಕ ಮೊಯ್ದಿನ್ ಬಾವಾ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಮನಪಾ ಮೇಯರ್ ಕವಿತಾ ಸನಿಲ್ ಮತ್ತಿತ್ತರರು ಉಪಸ್ಥಿತರಿದ್ದರು.
ವರದಿ: ಶರತ್