Header Ads
Header Ads
Breaking News

ಡಿಕೆಶಿ ಮನೆ ಮೇಲೆ ಐಟಿ ದಾಳಿ ಹಿನ್ನೆಲೆ: ಭಟ್ಕಳ ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ರಾಜ್ಯ ಇಂಧನ ಸಚಿವ ಡಿ. ಕೆ. ಶಿವಕುಮಾರ ವಿರುದ್ದ ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿ ನಡೆಸಿ ದ್ವೇಷದ ರಾಜಕಾರಣ ಮಾಡುತ್ತಾರೆಂದು ಖಂಡಿಸಿ ಭಟ್ಕಳದ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೆರವಣಿಗೆ ಹಾಗೂ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದರು
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಠ್ಠಲ್ ನಾಯ್ಕ ಕೇಂದ್ರದ ಬಿಜೆಪಿ ಸರಕಾರ ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸುತ್ತಿದೆ. ದೇಶದಲ್ಲಿ ವಿರೋಧ ಪಕ್ಷವೇ ಇರಬಾರದು ಎನ್ನುವ ಧೋರಣೆಯನ್ನು ಮುಂದೆ ಮಾಡಿಕೊಂಡು ಸಚಿವರ ವಿರುದ್ದ ಐಟಿ ದಾಳಿ ನಡೆಸಿ ಬೆದರಿಸುವ ಕೆಲಸ ಮಾಡುತ್ತಿದೆ. ಗುಜರಾತಿನಲ್ಲಿ ರಾಜ್ಯ ಸಭಾ ಸ್ಥಾನವನ್ನು ಗೆಲ್ಲಲು ಕುದುರೆ ವ್ಯಾಪಾರಕ್ಕೆ ಮುಂದಾಗಿರುವ ಬಿಜೆಪಿ ಮುಂದಿನ ಚುನಾವಣೆಯಲ್ಲಿ ಅಲ್ಲಿ ಸಂಪೂರ್ಣ ನೆಲಕಚ್ಚಲಿದೆ. ಐಟಿ ದಾಳಿಗೆ ಸಚಿವ ಡಿ. ಕೆ. ಶಿವಕುಮಾರ ಹಾಗೂ ಕಾಂಗ್ರೆಸ್ ಪಕ್ಷ ಹೆದರುವುದಿಲ್ಲ ಎಂದ ಅವರು ಇಂತಹ ದಾಳಿ ನಡೆಸಲು ಪ್ರೇರೇಪಿಸುವ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಪ್ರತಿಭಟನೆಯಲ್ಲಿ ಜಿ.ಪಂ. ಸದಸ್ಯರಾದ ಸಿಂಧು ಭಾಸ್ಕರ ನಾಯ್ಕ, ಪುಷ್ಪಾ ನಾಯ್ಕ. ತಾ.ಪಂ. ಅಧ್ಯಕ್ಷ ಈಶ್ವರ ನಾಯ್ಕ, ಪುರಸಭೆ ಅಧ್ಯಕ್ಷ ಮೊಹ್ಮದ್ ಸಾಧಿಕ್ ಮಟ್ಟಾ, ಜಾಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಅಬ್ದುರ್ ರಹೀಂ ಶೇಖ್, ತಾ.ಪಂ. ಸದಸ್ಯರಾದ ಮಾಬ್ಲೇಶ್ವರ ನಾಯ್ಕ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ರಾಘವೇಂದ್ರ ಮಲ್ಯ. ಭಟ್ಕಳ.

Related posts

Leave a Reply