Header Ads
Header Ads
Breaking News

ಡಿಕೆಶಿ ಸೇರಿದಂತೆ 5 ಜನರಿಗೆ ಇಡಿಯಿಂದ ಸಮನ್ಸ್ ಜಾರಿ : ವಿಚಾರಣೆ ಹಾಜರಾಗುವಂತೆ ಇಡಿಯಿಂದ ಸಮನ್ಸ್

ಆದಾಯ ತೆರಿಗೆ ದಾಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಪ್ರಭಾವಿ ಮುಖಂಡ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಐದು ಮಂದಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. 

ಎಐಸಿಸಿಗೆ ಹಣ ಪಾವತಿ ಹಾಗೂ ಹವಾಲಾ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಚಿವ ಡಿಕೆ ಶಿವಕುಮಾರ್, ಸಚಿನ್ ನಾರಾಯಣ್, ಆಂಜನೇಯ, ಸುನೀಲ್ ಶರ್ಮಾ ಹಾಗೂ ರಾಜೇಂದ್ರಗೆ ಸಮನ್ಸ್ ಜಾರಿ ಮಾಡಿದೆ ಎಂದು ಮೂಲಗಳು ಹೇಳಿವೆ.

ಐಟಿಯಿಂದಲೂ ಸಚಿವ ಡಿಕೆಶಿಗೆ ನೋಟಿಸ್ ನೀಡಲಾಗಿದೆ. ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡುವಂತೆ ಆದಾಯ ತೆರಿಗೆ ಇಲಾಖೆ ಕೂಡಾ ನೋಟಿಸ್ ನಲ್ಲಿ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆಯಲ್ಲಿ ಪ್ರಕರಣ ದಾಖಲಾಗಿದ್ದರಿಂದ ದೆಹಲಿಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಮಾಧ್ಯಮದ ವರದಿಗಳು ಹೇಳಿವೆ.

Related posts

Leave a Reply