Header Ads
Header Ads
Breaking News

ಡಿವೈಎಫ್‌ಐ ಮಾಜಿ ಅಧ್ಯಕ್ಷ ಸಹಿತ ಇತರರು ಕಾಂಗ್ರೆಸ್‌ಗೆ ಸೇರ್ಪಡೆ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ

ಸಿಪಿಐಎಂನಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ, ಡಿವೈಎಫ್‌ಐ ಮುಖಂಡ ಸುಬ್ರಹ್ಮಣ್ಯ ಆಚಾರ್ ಪಡುಕೋಣೆ ಸಹಿತ ಇತರರು ಕಾಂಗ್ರೆಸ್‌ಗೆ ಸೇರ್ಪಡೆಗೆಗೊಂಡರು.ಶಾಸಕ ಕೆ.ಗೋಪಾಲ ಪೂಜಾರಿ ಅವರ ನಿವಾಸದಲ್ಲಿ ಸಿಪಿಐಎಂನ ಸುಬ್ರಹ್ಮಣ್ಯ ಆಚಾರ್ ಪಡುಕೋಣೆ, ಬಾಬು ಪೂಜಾರಿ ನಾಡ, ಮಂಜುನಾಥ ಪೂಜಾರಿ ಸೇನಾಪುರ, ಮಹೇಶ ಪುತ್ರನ್ ಕೊಣ್ಕಿ ಅವರುಗಳಿಗೆ ಶಾಸಕ ಕೆ.ಗೋಪಾಲ ಪೂಜಾರಿ ಪಕ್ಷದ ಧ್ವಜ ನೀಡುವ ಮೂಲಕ ಬರಮಾಡಿಕೊಂಡರು.

ಇದೇ ವೇಳೆ ಮಾತನಾಡಿದ ಸುಬ್ರಹ್ಮಣ್ಯ ಆಚಾರ್ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಸೇರುತ್ತಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾ.ಪಂ.ಸದಸ್ಯ ರಾಜು ದೇವಾಡಿಗ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ನಾಡ ಗ್ರಾ.ಪಂ.ಅಧ್ಯಕ್ಷೆ ಜೆನ್‌ಮೇರಿ ಒಲೊವೇರಾ, ಉಪಾಧ್ಯಕ್ಷ ಅರವಿಂದ ಪೂಜಾರಿ, ರಾಜೀವ ಶೆಟ್ಟಿ, ಸತೀಶ ರಾಮನಗರ, ರಾಮ ಪೂಜಾರಿ, ಪ್ರಭು ಕೆನಡಿ ಪಿರೇರಾ, ವಿಜಯ ಮೊಗವೀರ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply