Header Ads
Header Ads
Breaking News

ಡಿ. 1ರಿಂದ ಫಾಸ್ಟ್ ಟ್ಯಾಗ್ ರೂಲ್ಸ್ ಜಾರಿಗೆ

ಕುಂದಾಪುರ: ದೇಶದಾದ್ಯಂತ ಡಿ.1ರಿಂದ ಕೇಂದ್ರ ಸರಕಾರದ ಆದೇಶದಂತೆ ಫಾಸ್ಟ್ ಟ್ಯಾಗ್ ಪದ್ದತಿ ಜಾರಿಗೆ ಬರಲಿದ್ದು, ಸಾಸ್ತಾನ ಟೋಲ್ ವ್ಯಾಪ್ತಿಯ ಮಾಬುಕಳದಿಂದ ಕೋಟವರೆಗಿನ 14 ಗ್ರಾಮಗಳ ವಾಹನ ಸವಾರರಿಗೆ ಕಳೆದ ವರ್ಷದಿಂದ ಇದ್ದ ರಿಯಾಯತಿ ವ್ಯವಸ್ಥೆ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಕೋಟ ಪೊಲೀಸ್ ಠಾಣಾಧಿಕಾರಿ ನಿತ್ಯಾನಂದ ಗೌಡ ಹೇಳಿದರು.

ಸಾಸ್ತಾನದ ಶಿವಕೃಪಾ ಕಲ್ಯಾಣಮಂಟಪದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಆದೇಶದಂತೆ ಉಡುಪಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಲ್ಲಿ ನಡೆದ ಫಾಸ್ಟ್‌ಟ್ಯಾಗ್ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಾರ್ವಜನಿಕರಲ್ಲಿ ಈ ಬಗ್ಗೆ ಯಾವುದೇ ಗೊಂದಲ ಬೇಡ. ಎಲ್ಲರೂ ಫಾಸ್ಟ್‌ಟ್ಯಾಗ್ ಅನ್ನು ಅಳವಡಿಸಿಕೊಳ್ಳಲೇಬೇಕಾಗಿರುವುದು ಅನಿವಾರ್ಯವಾಗಿದ್ದು, ಟೋಲ್‌ನ ಹತ್ತು ಗೇಟ್‌ಗಳಲ್ಲಿ ಸ್ಥಳೀಯರಿಗೆ ಎರಡು ಭಾಗದಲ್ಲಿ ಒಂದೊಂದು ಗೇಟ್ ಮುಕ್ತಗೊಳಿಸಲಾಗಿದೆ. ಇನ್ನುಳಿದಂತೆ ಎರಡು ಭಾಗದ ನಾಲ್ಕು ಗೇಟ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಅಳವಡಿಸಿಕೊಂಡು ಹೋಗಬೇಕಾಗುತ್ತದೆ. ಸ್ಥಳೀಯರಿಗೆ ಮತ್ತು ಫಾಸ್ಟ್‌ಟ್ಯಾಗ್ ಅಳವಡಿಸಿರದ ವಾಹನಗಳ ಟೋಲ್ ವಸೂಲಿಗೆ ಹೆಚ್ಚುವರಿ ಸಿಬ್ಬಂದಿ ಮತ್ತು ಸ್ಪೈಪ್ ಮಿಷನ್ ಅನ್ನು ಅಳವಡಿಸಿಕೊಳ್ಳಲು ತಿಳಿಸಿದ್ದೇವೆ ಎಂದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ನವೀನ್ ಮಾತನಾಡಿ, ಇದೇ 28ರಿಂದ ಉಡುಪಿ ಜಿಲ್ಲೆಯ ಟೋಲ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಅನ್ನು ವಾಹನಗಳನ್ನು ತಂದಲ್ಲಿ ನೀಡಲಾಗುತ್ತಿದೆ. ಇದಲ್ಲದೇ ಪೇಟಿಎಂ, ಅಮೆಜಾನ್ ಮತ್ತು ಇನ್ನಿತರ ಕಡೆಗಳಲ್ಲಿಯೂ ಇದನ್ನು ಅಳವಡಿಸಿಕೊಳ್ಳಬಹುದಾಗಿದೆ ಎಂದರು. ಸಭೆಯಲ್ಲಿ ಸಾಸ್ತಾನ ಟೋಲ್‌ನ ಕೇಶವಮೂರ್ತಿ, ಹೋರಾಟ ಸಮಿತಿಯ ಪ್ರತಾಪ್ ಶೆಟ್ಟಿ ಸಾಸ್ತಾನ, ವಿಠಲ್ ಪೂಜಾರಿ, ಅಲ್ವಿನ್ ಅಂದ್ರಾದೆ, ಶ್ಯಾಮಸುಂದರನಾಯರಿ, ನಾಗರಾಜ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.

 

Related posts

Leave a Reply

Your email address will not be published. Required fields are marked *