Header Ads
Header Ads
Breaking News

ಡಿ. ೬ರಂದು  ಸುಳ್ಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ

ಸುಳ್ಯ: ಸುಳ್ಯ ತಾಲೂಕು ಮಟ್ಟದ ವಿಶ್ವ ವಿಕಲ ಚೇತನ ದಿನಾಚರಣೆಯು ಡಿ.ಆರರಂದು ಸುಳ್ಯ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಎಂ.ಬಿ. ಫೌಂಡೇಶನ್‌ನ ಅಧ್ಯಕ್ಷ ಎಂ.ಬಿ.ಸದಾಶಿವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಎಂ.ಬಿ.ಫೌಂಡೇಶನ್ ನೇತೃತ್ವದಲ್ಲಿ ಸುಳ್ಯ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲಯನ್ಸ್, ಲಯನೆಸ್, ರೋಟರಿ, ಮತ್ತು ಇನ್ನರ್ ವೀಲ್ ಕ್ಲಬ್ ಸಹಕಾರದಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಉದ್ಘಾಟಿಸುವರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸುವರು. ಜ್ಯೋತಿ ಸರ್ಕಲ್‌ನಿಂದ ಕಾರ್ಯಕ್ರಮ ನಡೆಯುವ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಯಲಿದೆ. ನಗರ ಪಂಚಾಯಿತಿ ಅಧ್ಯಕ್ಷೆ ಶೀಲಾವತಿ ಮಾಧವ ಮೆರವಣಿಗೆ ಉದ್ಘಾಟಿಸುವರು. ವೈದ್ಯಕೀಯ ಶಿಬಿರವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸುವರು.
10 ವರ್ಷದಿಂದ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಾಗಿ ದುಡಿಯುತ್ತಿರುವ ಪುಟ್ಟಣ್ಣ ವಲಿಕಜಿ, ಹರಿಣಿ ಅರಂತೋಡು, ದಿನೇಶ್ ದೇವಚಳ್ಳ, ಕೊಡುಗೈ ದಾನಿ ಇಬ್ರಾಹಿಂ ಸೀಫುಡ್, ಶರತ್ ಎಂಬವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುವುದು. ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಸನ್ಮಾನ ನೆರವೇರಿಸುವರು. ವಿಕಲಚೇತನರ ಗುರುತಿನ ಚೀಟಿ ಮಾಡಿಸಿ ಕೊಡಲಾಗುವುದು ಮತ್ತು ನವೀಕರಿಸಿ ನೀಡಲಾಗುವುದು. ದಿನಾಚರಣೆಯ ಅಂಗವಾಗಿ ವೈದ್ಯಕೀಯ ಶಿಬಿರವನ್ನೂ ಏರ್ಪಡಿಸಲಾಗಿದೆ ಎಂದು ಎಂ.ಬಿ.ಸದಾಶಿವ ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಸುಳ್ಯ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘದ ಅಧ್ಯಕ್ಷ ಪುಟ್ಟಣ್ಣ, ಕಾರ್ಯದರ್ಶಿ ಪ್ರವೀಣ್ ನಾಯಕ್ ಉಪಸ್ಥಿತರಿದ್ದರು.

Related posts

Leave a Reply