Header Ads
Header Ads
Breaking News

ಡಿ.1ರಂದು ಮೂಡುಬಿದಿರೆಯಲ್ಲಿ ಕೋಟಿ-ಚೆನ್ನಯ ಜೋಡುಕರೆ ಕಂಬಳ

ಮೂಡುಬಿದಿರೆಯ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಬಯಲು ಕಂಬಳ ಡಿ.೧ರಂದು ನಡೆಯಲಿದ್ದು, ಅಹಿಂಸತ್ಮಾಕವಾಗಿ ಕಾನೂನಿನ ಚೌಕಟ್ಟಿನ ಒಳಗೆ ನಿಗಮಿತ ಕಾಲಮಿತಿಯೊಂದಿಗೆ ಸಂಘಟಿಸಲಾಗುವುದು ಎಂದು ಕಂಬಳ ಸಮಿತಿ ಅಧ್ಯಕ್ಷ ಶಾಸಕ ಉಮಾನಾಥ ಎ.ಕೋಟ್ಯಾನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆಲಂಗಾರು ಚರ್ಚಿನ ಧರ್ಮಗುರು ರೆ.ಫಾ ವಾಲ್ಟರ್ ಡಿ’ಸೋಜ, ಶ್ರೀ ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವೇ.ಮೂ.ಈಶ್ವರ್ ಭಟ್, ನೂರಾನಿ ಮಸ್ಜೀದ್‌ನ ಮೌಲಾನ ಝೀಯ್ಯಾಲ್ಲಾ ಅವರು ಉದ್ಘಾಟಿಸಲಿದ್ದಾರೆ. ಚೌಟರ ಅರಮನೆಯ ಕುಲದೀಪ್ ಎಂ.ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ’

ಸಾಯಂಕಾಲ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ವಿಧಾನ ಪರಿಷತ್ತು ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಯು.ಟಿ.ಖಾದರ್ ಭಾಗವಹಿಸಲಿದ್ದಾರೆ.
ಸಂಸದರಾದ ನಳಿನ್‌ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ದ.ಕ ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪುರಸಭಾಧ್ಯಕ್ಷೆ ಹರಿಣಾಕ್ಷಿ ಎಸ್.ಸುವರ್ಣ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಸಹಿತ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಂಬಳ ಕ್ಷೇತ್ರದ ಸಾಧಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಹಾಗೂ ೨೦೧೭ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ನಾರಾವಿ ಯುವರಾಜ್ ಜೈನ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಸಮಿತಿಯ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ, ಜಿಲ್ಲಾ ಕೋಶಾಧಿಕಾರಿ ಸುರೇಶ್ ಕೆ.ಪೂಜಾರಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Related posts

Leave a Reply