Header Ads
Header Ads
Breaking News

ಡಿ.13ರಂದು ವಿಟ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಪುನರ್ ನಿರ್ಮಾಣಗೊಂಡ ಮಸೀದಿಯ ಉದ್ಘಾಟನಾ ಸಮಾರಂಭ

ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಪುನರ್ ನಿರ್ಮಾಣಗೊಂಡ ಮಸೀದಿಯ ಉದ್ಘಾಟನಾ ಸಮಾರಂಭ ಇದೇ 13ರಂದು ಮಧ್ಯಾಹ್ನ ನಡೆಯಲಿದೆ ಎಂದು ಕಡಂಬು ಜುಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಪಿ ಅಬ್ದುಲ್ ಖಾದರ್ ತಿಳಿಸಿದರು.

ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮಧ್ಯಾಹ್ನ 12 ಗಂಟೆಗೆ ಕಾಸರಗೋಡು ಖಾಝಿ ಅಲಿಕುಟ್ಟಿ ಮುಸ್ಲಿಯಾರ್ ಹಾಗೂ ಉಡುಪಿ ಜಿಲ್ಲಾ ಖಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಅವರ ಜಂಟಿ ನೇತೃತ್ವದಲ್ಲಿ ಉದ್ಘಾಟನೆಗೊಳ್ಳಲಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಬಿ ರಮಾನಾಥ ರೈ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್, ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪಾನ್ಸೋ ಪ್ರಾಂಕೋ, ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸಾಮಾಜಿಕ, ಧಾರ್ಮಿಕ, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಡಂಬು ಜುಮಾ ಮಸೀದಿ ಆಡಳಿತ ಸಮಿತಿ ಕಾರ್ಯದರ್ಶಿ ಬಿ.ಪಿ ಮಹಮ್ಮದ್, ಸದಸ್ಯರಾದ ಇಬ್ರಾಹಿಂ ಬಿ, ಮಹಮ್ಮದ್ ಕಡಂಬು, ಗ್ರಾಮ ಪಂಚಾಯಿತಿ ಸದಸ್ಯ ವಿ.ಕೆ ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು.

Related posts

Leave a Reply