Header Ads
Header Ads
Breaking News

ಡಿ.14ರಂದು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನೂತನ ಶಾಖೆಯ ಉದ್ಘಾಟನೆ

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ, ಸಜೀಪಮೂಡ-ಬೊಳ್ಳಾಯಿಯ ನೂತನ ಬೋಳಂತೂರು ಮೊದಲ ಶಾಖೆಯು ಡಿ. 14ರಂದು ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಹೇಳಿದ್ದಾರೆ.

ಅವರು ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ಬೆಳಿಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಬಿ.ರಮಾನಾಥ ರೈ ಅವರು ಭದ್ರತಾ ಕೋಶ ಉದ್ಘಾಟಿಸುವರು. ಜಿಪಂ ಸದಸ್ಯೆ ಮಂಜುಳಾ ಮಾವೆ ಅವರು ಠೇವಣಿ ಪತ್ರ ಬಿಡುಗಡೆ ಮಾಡುವರು. ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯೆ ಶೋಭಾ ರೈ, ಬೋಳಂತೂರು ಗ್ರಾಪಂ ಅಧ್ಯಕ್ಷೆ ಆಸಿಯಮ್ಮ, ಉಪಾಧ್ಯಕ್ಷ ಚಂದ್ರಶೇಖರ್ ರೈ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಪದಾಧಿಕಾರಿಗಳಾದ ವಾಸು ಪೂಜಾರಿ, ರಮೇಶ್, ಕಿಶೋರ್, ಲೋಕೇಶ್, ಅಶ್ವಿನಿ ಕುಮಾರ್ ಉಪಸ್ಥಿತರಿದ್ದರು.

Related posts

Leave a Reply