Header Ads
Header Ads
Header Ads
Breaking News

ಡಿ.22ರಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗ್ರಾಮ ವಾಸ್ತವ್ಯ : ವಾಸ್ತವ್ಯ ರೂಪುರೇಷೆಗಾಗಿ ಮಡಪ್ಪಾಡಿಯಲ್ಲಿ ಸಿದ್ಧತಾ ಸಭೆ

ಸುಳ್ಯ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಹಯೋಗದಲ್ಲಿ ಡಿ.22 ರಂದು ಮಡಪ್ಪಾಡಿಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯದ ಸಿದ್ಧತಾ ಸಭೆ ಮಡಪ್ಪಾಡಿ ಯುವಕಮಂಡಲದ ಸಭಾಭವನದಲ್ಲಿ ನಡೆಯಿತು.

ಸಿದ್ಧತಾ ಸಭೆಯಲ್ಲಿ ಭಾಗವಹಿಸಿದವರು ಗ್ರಾಮದ ಹಲವಾರು ಸಮಸ್ಯೆಗಳ ಪಟ್ಟಿಯನ್ನು ಮುಂದಿರಿಸಿದರು. ಗ್ರಾಮದ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಗ್ರಾಮವಾಸ್ತವ್ಯ ಕಾರಣವಾಗಬೇಕು ಎಂದು ಸಭೆಯಲ್ಲಿ ಮಾತನಾಡಿದ ಪ್ರಮುಖರು ಅಭಿಪ್ರಾಯ ವ್ಯಕ್ತಪಡಿಸಿದರು.  ಸುಳ್ಯ ಶಾಸಕ ಎಸ್.ಅಂಗಾರ ಮಾತನಾಡಿ ಗ್ರಾಮದ ಅಭಿವೃದ್ಧಿಯ ದೃಷ್ಠಿಯಿಂದ ಪೂರಕವಾಗಿ ಕಾರ್ಯಕ್ರಮವನ್ನು ಜೋಡಿಸಲಾಗಿದೆ. ರಸ್ತೆ ಸಮಸ್ಯೆ ಸೇರಿ ಗ್ರಾಮದ ಹಲವು ಸಮಸ್ಯೆಗಳು ಗಮನದಲ್ಲಿ ಇದೆ. ಗ್ರಾಮದಲ್ಲಿನ ಪ್ರಮುಖ ಸಮಸ್ಯೆಗಳ ಎಂದು ಪಟ್ಟಿ ತಯಾರಿಸಿ ನೀಡಲು ಸೂಚನೆ ನೀಡಲಾಗಿದೆ ಎಂದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಭರತ್ ಮುಂಡೋಡಿ, ಮಡಪ್ಪಾಡಿ ಗ್ರಾಮ ಪಂಚಾಯತ್ ಸದಸ್ಯ ವಿನಯಕುಮಾರ್ ಮುಳುಗಾಡು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಹಾಗೂಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *