Header Ads
Header Ads
Breaking News

ಡಿ.22: ಇಡ್ಕಿದು ಕೋಲ್ಪೆಯಲ್ಲಿ ಕಟೀಲು ಮೇಳದಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಪ್ರದರ್ಶನ

ವಿಟ್ಲ: ವಿಟ್ಲದ ಇಡ್ಕಿದು ಗ್ರಾಮದ ಕೋಲ್ಪೆ ನೇರ್ಲಾಜೆಯ ಸುಂದರಿ ರಾಮದಾಸ್ ಅವರ ಲಕ್ಷ್ಮೀ ವೆಂಕಟೇಶ್ವರ ನಿಲಯದಲ್ಲಿ ಡಿ.22ರಂದು ರಾತ್ರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.

ಈ ಕುಟುಂಬ ಪ್ರತಿ ಐದು ವರ್ಷಕ್ಕೊಮ್ಮೆ ಯಕ್ಷಗಾನ ಬಯಲಾಟ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಈಗಾಗಲೇ ಮನೆಯನ್ನು ಸಜ್ಜುಗೊಳಿಸಲಾಗಿದೆ. ರಸ್ತೆಯಿಂದ ಮನೆಯವರೆಗೆ ವಿದ್ಯುತ್ ದೀಪಗಳಿಂದ ಆಲಂಕರಿಸಲಾಗಿದೆ. ಮನೆಯ ಸುತ್ತಾಮುತ್ತ ಭರದ ಸಿದ್ಧತೆಗಳು ನಡೆಯುತ್ತಿದೆ.

ಸಾಯಂಕಾಲ ನಡೆಯಲಿರುವ ಸಭಾಕಾರ್ಯಕ್ರಮದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಕೆ.ವೆಂಕಟರಮಣ ಅಶ್ರಣ್ಣರವರು ಆಶೀರ್ವಚನ ನೀಡಲಿದ್ದಾರೆ. ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರಿ ಮೋಹನದಾಸ ಪರಮಹಂಸ ಸ್ವಾಮೀಜಿ, ಕೋಲ್ಪೆಗುತ್ತು ರಾಜಾರಾಮ ಶೆಟ್ಟಿ ಸಹಿತ ಹಲವಾರು ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ. ಬಳಿಕ ರಾಮಕೃಷ್ಣ ಕಾಟುಕುಕ್ಕೆಯವರಿಂದ ಭಕ್ತಿಗಾನಸುದ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಚೌಕಿ ಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಎಸ್.ಎಲ್.ವಿ ಗ್ರೂಫ್‍ನ ಮಾಲಕ ದಿವಾಕರ ದಾಸ್ ನೇರ್ಲಾಜೆ ಅವರು ತಿಳಿಸಿದ್ದಾರೆ.

Related posts

Leave a Reply