Header Ads
Header Ads
Breaking News

ಡಿ.22 ಮತ್ತು 23ರಂದು ಸಸಿಹಿತ್ಲು ಬೀಚ್‌ನಲ್ಲಿ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆ

ಮಂಗಳೂರು ಮತ್ತೊಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ. ತುಳುನಾಡಿನ ಪ್ರಕೃತಿ ರಮ್ಯ ಊರು ಸಸಿಹಿತ್ಲುವಿನಲ್ಲಿ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆ ನಡೆಯಲಿದೆ. ಕರ್ನಾಟಕದ ಸಂಘರತ್ನ ಪ್ರಶಸ್ತಿ ಪುರಸ್ಕೃತ, ಶ್ರೀ ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ನೇತೃತ್ವದಲ್ಲಿ ಡಿ.22 ಮತ್ತು 23ರಂದು ಕುಸ್ತಿ ಪಂದ್ಯಾಟ ನಡೆಯಲಿದೆ.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶ್ರೀ ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಅಧ್ಯಕ್ಷ ವಿನೋದ್ ಕುಮಾರ್ ಸಸಿಹಿತ್ಲು, 2018ನೇ ಸಾಲಿನ 44 ವರ್ಷದ ತುಳುನಾಡ ಕೇಸರಿ, ತುಳುಕುಮಾರ್ ಕುಸ್ತಿ ಸ್ಪರ್ಧೆಯ ಜೊತೆಗೆ 5 ವಿಭಾಗದಲ್ಲಿ ರಾಜ್ಯಮಟ್ಟದ ಪುರುಷಯ ಕುಸ್ತಿ, ಶಾಲಾ ಬಾಲಕರ ಕುಸ್ತಿ ಸ್ಪರ್ಧೆ ನಡೆಯಲಿದೆ. ಕರ್ನಾಟಕ ಕುಸ್ತಿ ಸಂಘ ಬೆಂಗಳೂರು ಮತ್ತು ದ.ಕ. ಜಿಲ್ಲಾ ಕುಸ್ತಿ ಸಂಘದ ಸಹಕಾರದೊಂದಿಗೆ ಡಿ.22 ಮತ್ತು 23ರಂದು ಸಸಿಹಿತ್ಲು ಬೀಚ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ ದ.ಕ. ಜಿಲ್ಲಾ ಕುಸ್ತಿ ಸಂಘದ ಪ್ರಧಾನ ಕಾರ್ಯದರ್ಶಿ ಸಂದೀಪ್ ಕುಮಾರ್, ಜಿಲ್ಲಾ ಮಟ್ಟದ ಪುರುಷರ ಮತ್ತು ಶಾಲಾ ವಿಭಾಗದ ಕುಸ್ತಿ ಸ್ಪರ್ಧೆಯ ದೇಹ ತೂಕವನ್ನು ಡಿ.21ರಂದು ಸಂಜೆ 3ರಿಂದ ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಸಲಾಗುವುದು. ಹಲವು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಎಲ್ಲಾ ವಿಭಾಗದ ಕುಸ್ತಿ ಪಟುಗಳಿಗೆ ನಗದು, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ, ದ.ಕ. ಜಿಲ್ಲಾ ಕುಸ್ತಿ ಸಂಘದ ಅಧ್ಯಕ್ಷ ಪ್ರಕಾಶ್ ವಿ. ಕರ್ಕೇರ, ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಉಪಾಧ್ಯಕ್ಷ ಸಂತೋಷ್ ಸಸಿಹಿತ್ಲು, ಕುಸ್ತಿ ಸಂಘಟನಾ ಸಮಿತಿಯ ಕಾರ್ಯದರ್ಶಿ ಶೋಭೇಂದ್ರ ಸಸಿಹಿತ್ಲು, ನೀತನ್ ಸುವರ್ಣ ಉಪಸ್ಥಿತರಿದ್ದರು.

Related posts

Leave a Reply