Header Ads
Header Ads
Breaking News

ಡಿ. 26 ಪುತ್ತೂರಿನಲ್ಲಿ ಸಾರ್ವಜನಿಕ ವಿಜಯ ಮಹಾ ಮಂತ್ರ ಜಪ ಹೋಮ ತರ್ಪಣ

ಪುತ್ತೂರು: ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ, ಬಜರಂಗದಳ, ಮಾತೃ ಶಕ್ತಿ ದುರ್ಗಾ ವಾಹಿನಿ ಸಂಘಟನೆಯ ಆಶ್ರಯದಲ್ಲಿ ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಎದುರಾಗಿರುವ ಅಡೆತಡೆಗಳು ನಿವಾರಣೆಯಾಗಿ ದೈವಾನುಗ್ರಹ ಪ್ರಾಪ್ತಿಗಾಗಿ ಪ್ರಾರ್ಥಿಸಿ ಡಿ.26ರಂದು ಪುತ್ತೂರು ದೇವಾಲಯದ ನಟರಾಜ ವೇದಿಕೆಯಲ್ಲಿ ಕಶೆಕೋಡಿ ಸೂರ್ಯನಾರಾಯಣ ನೇತೃತ್ವದಲ್ಲಿ ಸಾರ್ವಜನಿಕ ವಿಜಯ ಮಹಾ ಮಂತ್ರ ಜಪ ಹೋಮ ತರ್ಪಣ ಕಾರ್ಯಕ್ರಮ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಹೇಳಿದರು.

ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10.30 ರಿಂದ 12ರವರೆಗೆ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಮಧ್ಯಾಹ್ನ12 ಗಂಟೆಗೆ ಪುತ್ತೂರು ವಿಶ್ವ ಹಿಂದೂ ಪರಿಷತ್ ಗೌರವಾಧ್ಯಕ್ಷ ಯು. ಪೂವಪ್ಪ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.

ಡಿ. 26ರಂದು ಸಂಜೆ ಶಬರಿಮಲೆ ಕ್ಷೇತ್ರ ಸಂರಕ್ಷಣಾ ಸಮಿತಿಯ ಆಶ್ರಯದಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದಿಂದ ಆರಂಭವಾಗಿ ಮುಖ್ಯ ರಸ್ತೆಯ ಒಂದು ಬದಿಯಲ್ಲಿ ಹಣತೆಗಳನ್ನು ಉರಿಸಿ ಸಾಲಾಗಿ ನಿಲ್ಲುವ ಮೂಲಕ ಶ್ರೀ ಅಯ್ಯಪ್ಪ ಜ್ಯೋತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಶಬರಿಮಲೆ ಕ್ಷೇತ್ರ ರಕ್ಷಣೆಯ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಮುಖರಾದ ನ್ಯಾಯವಾದಿ ಮಾಧವ ಪೂಜಾರಿ, ಬಿ.ಎಸ್. ಸತೀಶ್, ಶ್ರೀಧರ ತೆಂಕಿಲ, ಮಾತೃ ಶಕ್ತಿ ಸಹ ಪ್ರಮುಖ್ ಮೋಹಿನಿ ದಿವಾಕರ್ ಉಪಸ್ಥಿತರಿದ್ದರು.

Related posts

Leave a Reply