Header Ads
Header Ads
Breaking News

ಡಿ. 8ರಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಘಟಿಕೋತ್ಸವ ಕಾರ್ಯಕ್ರಮ

ಪುತ್ತೂರು ನಗರದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ 2017-18ನೇ ಸಾಲಿನಲ್ಲಿ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಘಟಿಕೋತ್ಸವ ಕಾರ್ಯಕ್ರಮ ಡಿ. 8ರಂದು ಕಾಲೇಜಿನ ಕೇಶವ ಸಂಕಲ್ಪ ಸಭಾ ಭವನದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಎಂ. ಎಸ್. ಗೋವಿಂದೇ ಗೌಡ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂದರ್ಭ ಇಂಜಿನಿಯರಿಂಗ್ ಪದವಿ ಮತ್ತು ಎಂಬಿಎ ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುವುದು ಗರಿಷ್ಠ ಅಂಕಗಳನ್ನು ಗಳಿಸಿದ ಆರು ಮಂದಿ ವಿದ್ಯಾಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುವುದು ಎಂದರು.

ಬೆಳಿಗ್ಗೆ10.30ಕ್ಕೆ ನಡೆಯುವ ಸಮಾರಂಭದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಡಾ. ಕರಿಸಿದ್ದಪ್ಪ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಭಾಸ್ಕರ ಕುಲಕರ್ಣಿ, ಮಾದ್ಯಮ ಸಂಚಾಲಕ ಪ್ರೊ. ಆಶ್ಲೆ ಡಿ.ಸೋಜ ಉಪಸ್ಥಿತರಿದ್ದರು.

Related posts

Leave a Reply