Header Ads
Breaking News

ತಪ್ಪು ಮಾಡಿದವರು ಯಾರೇ ಆಗಿದ್ದರೂ ತಪ್ಪಿಸಿಕೊಳ್ಳಲು ಅವಕಾಶ ಇಲ್ಲ : ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿಕೆ

ಕಾನೂನಿನ ಎದುರು ಎಲ್ಲರೂ ಸಮಾನರು. ತಪ್ಪು ಮಾಡಿದವರು ಯಾರೇ ಆಗಿದ್ದರೂ ಅವರು ತಪ್ಪಿಸಿಕೊಳ್ಳಲು ಅವಕಾಶ ನೀಡುವುದಿಲ್ಲ. ಜಾಮೀನು ದೊರೆಯದಂತೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.ಮಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಪೊಲೀಸರಿಗೆ ಹೈ ಪೊಫೈಲ್-ಲೋ ಪೊಫೈಲ್ ಪ್ರಕರಣಗಳು ಎಂಬುದಿಲ್ಲ. ಎಲ್ಲರೂ ಸಮಾನರು. ಮಾದಕ ವಸ್ತುಗಳನ್ನು ನಿಯಂತ್ರಿಸುವಲ್ಲಿ ಎಲ್ಲ ಪೊಲೀಸ್ ಠಾಣೆಗಳಿಗೂ ಜವಾಬ್ದಾರಿ ಇರುತ್ತದೆ. ಮಾದಕ ವಸ್ತುಗಳು ಅಂತಾರಾಷ್ಟ್ರೀಯವಾಗಿ ವಿಮಾನಗಳ ಮೂಲಕವೂ ಬರುವುದು, ಮಾದಕ ವಸ್ತು ಸಾಗಾಟಗಾರರು ಸೈಬರ್ ಅಪರಾಧಗಳಲ್ಲಿಯೂ ತೆರೆದುಕೊಂಡಿರುವುದು ಮೊದಲಾದ ವಿಚಾರಗಳು ತಿಳಿದಿದೆ. ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಯುತ್ತಿದೆ. ಕೇಂದ್ರದ ತನಿಖಾ ಸಂಸ್ಥೆಗಳ ಜತೆಗೂ ಕೈ ಜೋಡಿಸುತ್ತಿದ್ದೇವೆ ಎಂದರು.ಬೆಂಗಳೂರಿನಲ್ಲಿ ಡ್ರಗ್ಸ್ ಪೆಡ್ಲರ್‍ಗಳ ಬಂಧನ ಪ್ರಕರಣಗಳು ಮತ್ತು ಮಂಗಳೂರಿಗೂ ನಂಟು ಇರುವ ಕುರಿತಾಗಿ ಪ್ರಶ್ನಿಸಿದಾಗ “ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ಹೇಳಿಕೆ ನೀಡಲಾಗದು. ತನಿಖೆ ಪೂರ್ಣಗೊಂಡ ಅನಂತರ ಎಲ್ಲ ಮಾಹಿತಿ ನೀಡಲಾಗುವುದು’ ಎಂದು ಪೊಲೀಸ್ ಮಹಾನಿರ್ದೇಶಕರು ಹೇಳಿದರು.ಈ ಸಂದರ್ಭ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀ ಪ್ರಸಾದ್, ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಐಜಿಪಿ ದೇವಜ್ಯೋತಿ ರಾಯ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *