Header Ads
Header Ads
Breaking News

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ನಿಧನ ಹಿನ್ನೆಲೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚನೆ.

“ಬದುಕಿರುವಾಗಲೇ ದಂತಕಥೆಯಂತಿದ್ದ” ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ತಮ್ಮ ಜೀವಿತಾವಧಿ ಪೂರ್ಣ ತಮಿಳುನಾಡಿನ ಅಭಿವೃದ್ಧಿಗೆ ಶ್ರಮಿಸಿದ ಕರುಣಾನಿಧಿ ಅವರು ಪ್ರಾದೇಶಿಕ ಪಕ್ಷವನ್ನು ಸಧೃಢಗೊಳಿಸುವಲ್ಲಿ ಪ್ರದರ್ಶಿಸಿದ ಮುತ್ಸದ್ದಿತನ ವೈಶಿಷ್ಟ್ಯಪೂರ್ಣ. ಹಲವು ಬಾರಿ ಶ್ರೀ ಕರುಣಾನಿಧಿ ಅವರನ್ನು ಭೇಟಿ ಮಾಡಿದ್ದೆ. ಪ್ರಾದೇಶಿಕ ಪಕ್ಷಗಳ ಮಹತ್ವವನ್ನು ಪ್ರತಿ ಬಾರಿಯೂ ನನಗೆ ಮನವರಿಕೆ ಮಾಡಿಕೊಡುತ್ತಿದ್ದರು. ಹಿಂದುಳಿದ ವರ್ಗ ಹಾಗೂ ತುಳಿತಕ್ಕೊಳಗಾದವರ ಬಗ್ಗೆ ಅವರು ತೆಗೆದುಕೊಂಡ ಜನಪ್ರಿಯ ಯೋಜನೆಗಳನ್ನು ಇಂದು ದೇಶದ ವಿವಿಧ ರಾಜ್ಯಗಳು ಅನುಕರಿಸುತ್ತಿವೆ ಎಂದು ಸಿಎಂ ಹೇಳಿದರು. ಇನ್ನು ಚಿತ್ರರಂಗದ ಮೂಲಕ ರಾಜಕೀಯಕ್ಕೆ ಬಂದು ತಮಿಳುನಾಡಿನ ಶೋಷಿತ ವರ್ಗಕ್ಕೆ ಗಟ್ಟಿದನಿ ನೀಡಿದ ಕರುಣಾನಿಧಿ ಅವರ ರಾಜಕೀಯ ಸಿದ್ಧಾಂತ ನಮಗೆಲ್ಲರಿಗೂ ಮಾದರಿ. ಅವರ ನಿಧನದಿಂದ ಭಾರತದ ರಾಜಕೀಯ ರಂಗದಲ್ಲಿ ವೈಶಿಷ್ಟ್ಯಪೂರ್ಣ ವ್ಯಕ್ತಿತ್ವವೊಂದು ಕಣ್ಮರೆಯಾಗಿದೆ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.ರಾಜ್ಯ ಗೃಹರಕ್ಷಕ ದಳದ ಬಲವರ್ಧನೆಗೆ ವಿಶೇಷ ಕ್ರಮಗಳನ್ನು ಇಲಾಖೆ ಕೈಗೊಂಡಿದೆ ಎಂದು , ಗೃಹರಕ್ಷಕ ದಳ ಮತ್ತು ಪದನಿಮಿತ್ತ ಅಪರ ನಿರ್ದೇಶಕರು ಹಾಗೂ ಪೌರರಕ್ಷಣೆ ಆರಕ್ಷಕ ಮಹಾ ನಿರೀಕ್ಷಕರು ಮತ್ತು ಅಪರ ಮಹಾ ಸಮಾದೇಷ್ಟರಾದ ರೂಪ ಮೌದ್ಗಿಲ್ ನುಡಿದರು.

Related posts

Leave a Reply