Header Ads
Header Ads
Breaking News

ತಳಸಮುದಾಯಗಳ ಸಾಂಸ್ಕೃತಿಕ ಸಂಚಲನ ಎರಡು ದಿನಗಳ ರಾಷ್ಟ್ರೀಯ ವಿಚಾರಣಾ ಸಂಕಿರಣ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಆಯೋಜನೆ

 

ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನಕದಾಸ ಅಧ್ಯಯನ ಸಂಶೋಧನಾ ಪೀಠ ಮತ್ತು ಮಣಿಪಾಲ ವಿಶ್ವವಿದ್ಯಾಲಯದಿಂದ ತಳಸಮುದಾಯಗಳ ಸಾಂಸ್ಕೃತಿಕ ಸಂಚಲನ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರಣಾ ಸಂಕಿರಣ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆಯಿತು.
ವಿಚಾರ ಸಂಕಿರಣವನ್ನು ಬೆಂಗಳೂರು ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಮನ್ವಯಾಧಿಕಾರಿ ಕಾ ತ ಚಿಕ್ಕಣ್ಣ ಉದ್ಘಾಟಿಸಿ ಮಾತನಾಡಿದ ಅವರು,
ಕನಕದಾಸರನ್ನು ಸಂತನಾಗಿ ಭಕ್ತನಾಗಿ ಕವಿಯಾಗಿ ಕಾಣಲಾಗುತ್ತಿದೆ ಆದರೆ ಅವರೊಬ್ಬ ಶ್ರೇಷ್ಟ ವಿಚಾರವಾದಿ. ಧರ್ಮ ಒಂದು ಸಾಂಸ್ಥಿಕ ರೂಪ ಪಡೆಯುತ್ತಿತ್ತು ಅದನ್ನು ಕಡೆವಿ ಹೊಸದಾಗಿ ಕಟ್ಟಿದ್ದು ಕನಕದಾಸರು. ಕನಕದಾಸರ ಬಗ್ಗೆ ಎಲ್ಲ ಆಯಾಮಗಳಲ್ಲಿ ಅಧ್ಯಯನ ನಡೆಯಬೇಕಿದೆ. ಸಂತ ಪರಂಪರೆಯೊಂದಿಗೆ ಕನಕದಾಸರ ತೌನನಿಕ ಅಧ್ಯಯನ ನಡೆಯುತ್ತಿದೆ ಎಂದರು.
ಮಣಿಪಾಲ ವಿಶ್ವವಿದ್ಯಾಲಯ ಕನಕದಾಸ ಅಧ್ಯಯನ ಸಂಶೋಧನಾ ಪೀಠದ ಸಂಯೋಜನಾಧಿಕಾರಿ ಪ್ರೊ ವರದೇಶ ಹಿರೇಗಂಗೆ, ಮಣಿಪಾಲ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಎಚ್ ಎಸ್ ಬಲ್ಲಾಳ್ ಮತ್ತಿತರರು ಉಪಸ್ಥಿತರಿದ್ದರು.
ವರದಿ:ಪಲ್ಲವಿ ಸಂತೋಷ್

Related posts

Leave a Reply