Header Ads
Breaking News

ತಹಸೀಲ್ದಾರ್ ಹತ್ಯೆಯನ್ನು ಖಂಡಿಸಿ ಮೂಡುಬಿದಿರೆಯ ತಾಲೂಕು ಘಟಕದಿಂದ ಸರ್ಕಾರಕ್ಕೆ ಮನವಿ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ತಹಸೀಲ್ದಾರ್ ಬಿ.ಕೆ ಚಂದ್ರಮೌಳೇಶ್ವರ ಅವರ ಹತ್ಯೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಮೂಡುಬಿದಿರೆ ತಾಲ್ಲೂಕು ಘಟಕದಿಂದ ತಹಶಿಲ್ದಾರ್ ಅನಿತಾಲಕ್ಷ್ಮಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಸರಕಾರಿ ನೌಕರರು ಭಯದಿಂದ ಕೆಲಸ ಮಾಡುವಂತಾಗಿದೆ. ಬಂಗಾರಪೇಟೆ ತಹಶಿಲ್ದಾರ್ ಹತ್ಯೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಅನುಕಂಪದ ಆಧಾರದಲ್ಲಿ ಸರಕಾರಿ ನೌಕರಿ ನೀಡಬೇಕು. ಸರಕಾರಿ ನೌಕರರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತಹ ವಾತಾವರಣವನ್ನು ಸರಕಾರ ನಿರ್ಮಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

Related posts

Leave a Reply

Your email address will not be published. Required fields are marked *