Breaking News

ತಿಂಗಳೊಳಗೆ ಉಡುಪಿ ಜಿಲ್ಲೆಯ ಮರಳು ಸಮಸ್ಯೆ ಕೊನೆ, ಕುಂದಾಪುರದಲ್ಲಿ ಶಾಸಕ ಗೋಪಾಲ ಪೂಜಾರಿ


ನೂತನ ಮರಳು ನೀತಿ ಅತೀ ಶೀಘ್ರದಲ್ಲಿ ಜಾರಿಯಾಗುತ್ತದೆ ಎಂದು ಶಾಸಕ ಗೋಪಾಲ ಪೂಜಾರಿ ತಿಳಿಸಿದ್ದಾರೆ. ಕುಂದಾಪುರ ಗ್ರಾಮಾಂತರ ಠಾಣೆಯ ಉದ್ಘಾಟನೆ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ಉಡುಪಿ ಜಿಲ್ಲೆಯ ಮರಳು ಸಮಸ್ಯೆ ಬಗ್ಗೆ ಈಗಾಗಲೇ ಗಣಿ ಇಲಾಖೆಯ ಮೇಲಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿಯವರು ಕೂಡ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ಒಂದು ವಾರದಲ್ಲಿ ಸರಿಪಡಿಸುವಂತೆ ಸೂಚಿಸಿದ್ದಾರೆ. ಈಗಾಗಲೇ ಕ್ಯಾಬಿನೆಟ್‌ನಲ್ಲಿ ಕೂಡ ಒಮ್ಮೆ ಚರ್ಚೆಯಾಗಿದೆ. ಆಸ್ಕರ್ ಫೆರ್ನಾಂಡಿಸ್ ಕಾನೂನು ಸಚಿವ ಟಿ. ಬಿ. ಜಯಚಂದ್ರರೊಂದಿಗೆ ಮಾತುಕತೆ ನಡೆಸಿದ್ದು, ಮತ್ತೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಒಂದು ವಾರದಲ್ಲಿ ಹೊಸ ನೀತಿ ಜಾರಿಗೊಳ್ಳಲಿದೆ.

Related posts

Leave a Reply