Header Ads
Header Ads
Breaking News

ತೀವ್ರ ಕುತೂಹಲ ಕೆರಳಿಸಿದ್ದ ಸ್ಥಳೀಯ ಸಂಸ್ಥೆ ಚುನಾವಣೆ. ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಧೂಳಿಪಟ. ಬಿಜೆಪಿಗೆ ಭರ್ಜರಿ ಗೆಲುವು.

ಇಂದು ಕುತೂಹಲದಿಂದ ಕಾಯುತ್ತಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ.ಉಡುಪಿ ನಗರಸಭೆಯಲ್ಲಿ ಬಿಜೆಪಿ ಪಾರಮ್ಯ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ನಿಂದ ಅಧಿಕಾರ ಕಸಿದುಕೊಂಡಿದೆ. ಉಡುಪಿ ನಗರಸಭೆ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ಈ ಬಾರಿ ಬಿಜೆಪಿ ಇಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ಗೆ ಭಾರೀ ಮುಖಭಂಗವಾಗಿದ್ದು, ಪ್ರಮೋದ್ ಮಧ್ವರಾಜ್ ವಾರ್ಡ್ ನಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ನಗರಸಭಾ ಮಾಜಿ ಅಧ್ಯಕ್ಷ ಮೀನಾಕ್ಷಿ ಬನ್ನಂಜೆಗೆ ಸೋಲಾಗಿದೆ. ಈ ನಗರಸಭೆಯಲ್ಲಿ ಬಿಜೆಪಿ 31 ಮತ್ತು ಕಾಂಗ್ರೆಸ್ ೪ ಸ್ಥಾನಗಳನ್ನು ಗಳಿಸಿವೆ.

Related posts

Leave a Reply