Header Ads
Header Ads
Breaking News

ತುಳು ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2017ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರದಾನ ಸಮಾರಂಭವು ಜೂನ್ ೩೦ರಂದು ಅಕಾಡೆಮಿಯ ತುಳುಭವನದ ಸಿರಿಚಾವಡಿಯಲ್ಲಿ ನಡೆಯಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎ.ಸಿ ಭಂಡಾರಿ ಹೇಳಿದರು.ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ತುಳು ಯಕ್ಷಗಾನ ಕ್ಷೇತ್ರದಲ್ಲಿ ಡಾ. ಶಿಮಂತೂರು ನಾರಾಯಣ ಶೆಟ್ಟಿ, ತುಳು ಜಾನಪದ ಕ್ಷೇತ್ರದಲ್ಲಿ ಸೇಸಪ್ಪ ಪಂಬದ, ತುಳು ಸಾಹಿತ್ಯ ಕ್ಷೇತ್ರದಲ್ಲಿ ಶಕುಂತಳಾ ಭಟ್ ಹಾಗೂ ಪುಸ್ತಕ ಬಹುಮಾನ ವಿಜೇತರಾದ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಚಂದ್ರಹಾಸ ಸುವರ್ಣ, ರೂಪಕಲಾ ಆಳ್ವ ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು ಎಂದು ಹೇಳಿದರು.

ಇನ್ನೂ ಸಮಾರಂಭದಲ್ಲಿ ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಸಚಿವ ಖಾದರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ತುಳು ಅಕಾಡೆಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ. ಬಿ. ರಾಜೇಶ್. ಜಿ. ಉಪಸ್ಥಿತರಿದ್ದರು.

Related posts

Leave a Reply