Header Ads
Header Ads
Breaking News

ತುಳು ಬದುಕು ವಸ್ತು ಸಂಗ್ರಹಾಲಯದ ರಜತ ವರ್ಷಾಚರಣೆ

ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಹಾಗೂ ತುಳು ಬದುಕು ವಸ್ತು ಸಂಗ್ರಹಾಲಯದ ರಜತ ವರ್ಷಾಚರಣೆಯ ಉದ್ಘಾಟನಾ ಸಮಾರಂಭ ಬಿ.ಸಿ ರೋಡ್‌ನ ಸಂಚಯಗಿರಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಭಾರತೀಯರಲ್ಲಿ ಐತಿಹಾಸಿಕ ದೃಷ್ಟಿಕೋನ ಕಡಿಮೆಯಾಗುತ್ತಿದೆ. ಪ್ರಕೃತಿಯೊಂದಿಗೆ ಬದುಕುವುದು ಸಂಸ್ಕೃತಿಯನ್ನು ಪ್ರತಿಬಿಂಬಿಸಿದರೆ ಪ್ರಕೃತಿಯೊಂದಿಗಿನ ದಾರ್ಷ್ಯ ವಿಕೃತಿ ಯನ್ನು ತೋರಸುತ್ತದೆ ಎಂದರು.ಹಿರಿಯ ಲೇಖಕ ಆಗುಂಬೆ ನಟರಾಜ ಅವರು ವಿಶೇಷ ಉಪನ್ಯಾಸ ನೀಡಿದರು.ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ, ಪುತ್ತೂರು ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಕ್ಸೇವಿಯರ್ ಡಿಸೋಜಾ, ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಅಧ್ಯಕ್ಷ ತುಕರಾಮ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

Leave a Reply