Header Ads
Header Ads
Breaking News

ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಆಗ್ರಹ:ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ

ತುಳು ಭಾಷೆಯನ್ನು ಸಂವಿಧಾನದ ೮ ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕೆಂದು ಆಗ್ರಹಿಸಿ, ತುಳುನಾಡ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ತುಳುನಾಡಿನ ಪರ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ದೇಶ- ವಿದೇಶಗಳಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ತುಳುನಾಡ ಸಾಧಕರು ಇದ್ದಾರೆ. ಆದರೆ ಪಂಚ ದ್ರಾವಿಡ ಭಾಷೆಗಳಲ್ಲಿ ಉಳಿದ ನಾಲ್ಕು ಭಾಷೆಗೆ ಸಿಕ್ಕಿದ ಮಾನ್ಯತೆ ತುಳುವಿಗೆ ಸಿಗಲಿಲ್ಲ.ಇದು ಖೇದಕರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Related posts

Leave a Reply