Header Ads
Breaking News

ತು.ರ.ವೇ ದಶಸಂಭ್ರಮದ ಪ್ರಯುಕ್ತ ’ತೌಳವ ಉಚ್ಚಯ’

ತುಳುನಾಡ ರಕ್ಷಣಾ ವೇದಿಕೆಯ ದಶ ಸಂಭ್ರಮದ ಅಂಗವಾಗಿ ತೌಳವ ಉಚ್ಚಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಗರದ ಉರ್ವಸ್ಟೋರ್ ನಲ್ಲಿರುವ ತುಳುಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜ್ಞಾಪನಾ ಪತ್ರವನ್ನು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಬಿಡುಗಡೆಗೊಳಿಸಿದ್ರು.

ನಂತರ ಮಾತನಾಡಿದ ಸ್ವಾಮೀಜಿ, ಇಂದಿನ ಯುವಪೀಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅನಾವಶ್ಯಕವಾಗಿ ಸಮಯ ವ್ಯರ್ಥ ಮಾಡುತ್ತಿರುವುದು ಆತಂಕಕಾರಿ ವಿಷಯ ಅಂತಾ ಹೇಳಿದರಿ.ಕಾರ್ಯಕ್ರಮ ದಲ್ಲಿ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅಧ್ಯಕ್ಷತೆ ವಹಿಸಿದ್ದರು.ಈ ವೇಳೆ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಮೊಹಮ್ಮದ್ ಹನೀಫ್, ನಿಟ್ಟೆ ಶಶಿಧರ್ ಶೆಟ್ಟಿ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು

Related posts

Leave a Reply