Header Ads
Header Ads
Breaking News

ತೆಂಕಮಿಜಾರು ಗಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

ಮೂಡುಬಿದಿರೆ : ತೆಂಕಮಿಜಾರು ಗ್ರಾಮ ಪಂಚಾಯತ್ ವತಿಯಿಂದ “ಮಕ್ಕಳ ಗ್ರಾಮಸಭೆ”ಯು ಅಶ್ವತ್ಥಪುರ ಸಂತೆಕಟ್ಟೆಯ ಸಭಾಂಗಣದಲ್ಲಿ ನಡೆಯಿತು. ಜಿ.ಪಂ ಸದಸ್ಯೆ ಕೆ.ಪಿ ಸುಚರಿತ ಶೆಟ್ಟಿ ಮಕ್ಕಳ ಗ್ರಾಮಸಭೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.ತೆಂಕಮಿಜಾರು ಗ್ರಾ.ಪಂ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ “ಮಕ್ಕಳ ಗ್ರಾಮಸಭೆಯಲ್ಲಿ” ಜೈನ ಪ್ರೌಢಶಾಲೆಯ ಶಿಕ್ಷಕ ವಿನಯಚಂದ್ರ ಜೈನ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ “ಮಕ್ಕಳ ಹಕ್ಕುಗಳು ಮತ್ತು ಸಂರಕ್ಷಣೆ”ಯ ಬಗ್ಗೆ ಮಾತನಾಡಿ ವಿದ್ಯಾರ್ಥಿ ಜೀವನವೆನ್ನುವುದು ಅತ್ಯಮೂಲ್ಯವಾದುದು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಲ್ಲಮುಂಡ್ಕೂರು ವಲಯದ ಮೇಲ್ವೀಚಾರಕಿ ಭಾರತಿ ಅವರು ಶಾಲೆಯಲ್ಲಿ ಮಕ್ಕಳಿಗೆ ಬೇಕಾಗುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ನೀಡಿದರು.

ತೆಂಕಮಿಜಾರು ಗ್ರಾ.ಪಂಚಾಯತ್ ವ್ಯಾಪ್ತಿಯ 2 ಕಿರಿಯ ಪ್ರಾಥಮಿಕ,5 ಹಿರಿಯ ಮತ್ತು2 ಪ್ರೌಢಶಾಲೆಗಳಿಗೆ ಪಂಚಾಯತ್ ವತಿಯಿಂದ ಏರ್ಪಡಿಸಿದ್ದ ಭಾಷಣ, ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರತಿಭಾ ಕಾರಂಜಿಯಲ್ಲಿ ತಾ.ಪಂ ಮತ್ತು ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. 

ಪಶು ಇಲಾಖೆಯ ವೈದ್ಯಾಧಿಕಾರಿ ಗುರುನಾಥ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಪಂಚಾಯತ್ ಉಪಾಧ್ಯಕ್ಷೆ ಯಶೋಧ, ಮಾಜಿ ಅಧ್ಯಕ್ಷರುಗಳಾದ ಬಾಲಕೃಷ್ಣ ದೇವಾಡಿಗ, ಜೆ.ಕೆ ಹಸನ್ ಸದಸ್ಯರಾದ ಲಕ್ಷ್ಮೀ, ಕರುಣಾಕರ ಶೆಟ್ಟಿ, ಉಮೇಶ್ ಶೆಟ್ಟಿ, ರುಕ್ಮಯ ಗೌಡ, ದಿನೇಶ್, ಶಶಿಕಾಂತ್ ಶೆಟ್ಟಿಗಾರ್, ವಾಣಿ ವಿಲಾಸ ಶಾಲೆಯ ಮುಖ್ಯ ಶಿಕ್ಷಕ ಕೃಷ್ಣಮೂರ್ತಿ, ಆದರ್ಶ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಮತ್ತಿತರರು ಉಪಸ್ಥಿತರಿದ್ದರು. 

ಪಂಚಾಯತ್ ಕಾರ್ಯದರ್ಶಿ ಮಂಜಪ್ಪ ಸ್ವಾಗತಿಸಿದರು, ಆನಂದ್ ವಿವರ ನೀಡಿದರು. ಕ್ಲರ್ಕ್ ರಾಕೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

Leave a Reply