Header Ads
Header Ads
Breaking News

ತೈಲಸಹಿತ ದಿನಬಳಕೆ ವಸ್ತುಗಳ ಬೆಲೆಯೇರಿಕೆಗೆ ಖಂಡನೆ. ಮಂಗಳೂರಿನಲ್ಲಿ ಕಾಂಗ್ರೆಸ್, ಎಡಪಕ್ಷಗಳಿಂದ ಪ್ರತಿಭಟನೆ. ಎತ್ತಿನಗಾಡಿ, ಸೈಕಲ್ ಮೂಲಕ ಸಂಚರಿಸಿ ವಿಭಿನ್ನವಾಗಿ ಜನಜಾಗೃತಿ.

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸಹಿತ ದಿನಬಳಕೆ ವಸ್ತುಗಳ ಬೆಲೆಯೇರಿಕೆಯನ್ನು ಖಂಡಿಸಿ ಕಾಂಗ್ರೆಸ್ ಸಹಿತ ಎಡಪಕ್ಷಗಳಿಂದ ಮಂಗಳೂರಿನಲ್ಲಿ ಪ್ರತಿಭಟನೆ, ಜನಜಾಗೃತಿ ನಡೆಯಿತು. ಮಂಗಳೂರಿನ ಹಂಪನಕಟ್ಟೆಯಿಂದ ಸ್ಟೇಟ್‌ಬ್ಯಾಂಕ್‌ವರೆಗೆ ಎತ್ತಿನಗಾಡಿ, ಸೈಕಲ್‌ನಲ್ಲಿ ತೆರಳಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಯಲ್ಲೇ ಸೌದೆ ಒಲೆ ಉರಿಸಿ ಹಾಲು ಬಿಸಿ ಮಾಡುವ ಮೂಲಕ ಗ್ಯಾಸ್ ಬೆಲೆಯೇರಿಕೆ ವಿರುದ್ಧ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ಮಾತನಾಡಿದ ಕಾಂಗ್ರೆಸ್, ಸಿಪಿಐಎಂ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಮುಖಂಡರಾದ ಐವನ್ ಡಿಸೋಜ, ಮಿಥುನ್ ರೈ ಸಹಿತ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Related posts

Leave a Reply