Header Ads
Header Ads
Breaking News

ತೊಕ್ಕೊಟ್ಟುವಿನಲ್ಲಿ ಕಾರು ಅಪಘಾತ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯ

ಉಳ್ಳಾಲ: ತೊಕ್ಕೊಟ್ಟು ಕಾರು ಅಪಘಾತಕ್ಕೀಡಾಗಿ ಇಬ್ಬರು ಗಾಯಗೊಂಡಿರುವ ಘಟನೆ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಬಳ್ಳಾಲ್ ಬಾಗ್ ನಿವಾಸಿ ಜಾಯಲ್, ಮಿನಿಷಾ ಎಂಬವರು ಗಾಯಗೊಂಡಿದ್ದಾರೆ. ಅದೇ ಕಾರಿನಲ್ಲಿದ್ದ ವಿನೀತ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಾಡೂರು ಸಮೀಪ ಮೆಹಂದಿ ಕಾರ್ಯಕ್ರಮ ಮುಗಿಸಿ ಮಂಗಳೂರು ಕಡೆಗೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ತೊಕ್ಕೊಟ್ಟು ಫ್ಲೈಓವರ್ ಕಾಮಗಾರಿ ನಡೆಯುವ ಸ್ಥಳಕ್ಕೆ ಉರುಳಿಬಿದ್ದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

Leave a Reply